ರಾಯಚೂರು | ಏಳು ತಾಸು ವಿದ್ಯುತ್ ಪೂರೈಸುವಂತೆ ಅ.19ರಂದು ಪ್ರತಿಭಟನೆ

Date:

ರಾಜ್ಯದಲ್ಲಿ ಎದುರಾಗಿರುವ ವಿದ್ಯುತ್ ಕೊರತೆಯಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದು, ಏಳು ತಾಸು ವಿದ್ಯುತ್ ನೀಡುವಂತೆ ಒತ್ತಾಯಿಸಿ ಅಕ್ಟೋಬರ್‌ 19ರಂದು ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಲಿದೆ ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ತಿಳಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಮುಂಗಾರು ಮಳೆಯಿಂದ ವಿದ್ಯುತ್ ಉತ್ಪಾದನೆ ಇಳಿಕೆಯಾಗಿದ್ದು, ಐದು ತಾಸು ವಿದ್ಯುತ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಲಕ್ಷಾಂತರ ರೂ. ಹೂಡಿಕೆ ಮಾಡಿ ಕೃಷಿ ಪಂಪಸೆಟ್ ನಂಬಿರುವ ರೈತರಿಗೆ ನಷ್ಟ ತುಂಬಿಕೊಡುವವರು ಯಾರು” ಎಂದು ಪ್ರಶ್ನಿಸಿದರು.

“ಕೊರತೆ ವಿದ್ಯುತ್ ಖರೀದಿ ಮಾಡಿಯಾದರೂ ಗ್ರಾಮೀಣ ರೈತರಿಗೆ ಏಳು ತಾಸು ವಿದ್ಯುತ್ ನೀಡಬೇಕು.  ಗುಣಮಟ್ಟದ ಕಲ್ಲಿದ್ದಲು ಪೂರೈಕೆಯಾಗುತ್ತಿಲ್ಲ. ಉತ್ಪಾದನೆ ಇಳಿಕೆಯಾಗಿದೆಯೆಂದು ಹೇಳುವ ಸರ್ಕಾರ ಸಂಕಷ್ಟ ಸೂತ್ರ ರೂಪಿಸುವಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳೆಗಳು ತೆನೆಯೊಡೆಯುವ ಹಂತದಲ್ಲಿದ್ದು, ತುರ್ತಾಗಿ ವಿದ್ಯುತ್ ಪೂರೈಸಿದರೆ ಬೆಳೆ ಉಳಿಯಲು ಸಾಧ್ಯವಾಗಿದೆ. ಮಳೆಯಿಲ್ಲ, ನೀರಾವರಿ ಯೋಜನೆಗಳ ಕೊನೆಭಾಗದ ರೈತರಿಗೆ ನೀರಿಲ್ಲ. ಈಗ ವಿದ್ಯುತ್‌ ಕೂಡ ಇಲ್ಲದಂತಾಗಿದೆ. ಇದರಿಂದ ಜಿಲ್ಲೆಯ ಆರ್ಥಿಕತೆ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ. ಕೂಡಲೇ ಎಲ್ಲ ಎಸ್ಕಾಂಗಳು, ರೈತ ಸಂಘಟನೆಗಳ ಸಭೆ ಕರೆದು ಏಳು ತಾಸು ವಿದ್ಯುತ್ ನೀಡಲು ಮುಂದಾಗಬೇಕು. ಕೊರತೆ ವಿದ್ಯುತ್ ಖರೀದಿ ಮಾಡಿಯಾದರೂ ಬೆಳೆಗಳನ್ನು ಉಳಿಸಬೇಕು. ವಿದ್ಯುತ್ ಹಾಗೂ ನೀರಿನ ಕೊರೆತೆಯಿಂದ ಆಗಿರುವ ಬೆಳೆನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಏಳು ಗಂಟೆ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ವಿಷ ಸೇವಿಸಿದ ರೈತ

“ಚುಕ್ಕಿ ನಂಜುಂಡಸ್ವಾಮಿಯವರು ಈ ಹಿಂದೆ ನಮ್ಮ ಸಂಘಟನೆಯಲ್ಲಿದ್ದರು. ಪ್ರಾಯೋಜಕತ್ವದಲ್ಲಿ ವಿದೇಶಕ್ಕೆ ತೆರಳಿರುವ ಲೆಕ್ಕಪತ್ರ ಕೇಳಿದರೆ ಮತ್ತೊಂದು ರೈತ ಸಂಘ ಸ್ಥಾಪಿಸಿಕೊಂಡಿದ್ದಾರೆ” ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ದೇವರಾಜ ನಾಯಕ, ಬೂದೆಯ್ಯಸ್ವಾಮಿ ಗಬ್ಬೂರು, ಬ್ರಹ್ಮಯ್ಯ ಆಚಾರ್ಯ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...