ರಾಯಚೂರು | ರೈತ ವಿರೋಧಿ ಕಾಯ್ದೆ ರಾಜ್ಯದಲ್ಲಿ ರದ್ದುಗೊಳಿಸಲು ಆಗ್ರಹಿಸಿ ಸೆ.4ರಂದು ಪ್ರತಿಭಟನೆ

Date:

ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ರದ್ದುಗೊಳಿಸದೇ ಇರುವ ಕಾಂಗ್ರೆಸ್ ಸರ್ಕಾರ ನಡೆಯನ್ನು ಖಂಡಿಸಿ, ಕೃಷಿ ಪಂಪಸೆಟ್‌ಗಳಿಗೆ ಆಧಾರ ಜೋಡಣೆ ವಿರೋಧಿಸಿ ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ರೈತ ಸಂಘದ (ಕೋಡಿಹಳ್ಳಿ ಬಣ) ರಾಯಚೂರು ಜಿಲ್ಲಾಧ್ಯಕ್ಷ ಶಿವುಪುತ್ರಗೌಡ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೈತರ ಸಂಘಟನೆಗಳ ತೀವ್ರ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಮೂರು ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ. ಆದರೆ ರಾಜ್ಯ ಸರ್ಕಾರ ಇಂದಿಗೂ ಯಾವುದೇ ಕಾಯ್ದೆ ರದ್ದುಗೊಳಿಸಿಲ್ಲ. ಕಾಂಗ್ರೆಸ್ ಸರ್ಕಾರ ಕಾಯ್ದೆಗಳಿಗೆ ವಿರೋಧಿಸಿದ್ದರೂ ಜಾರಿಯನ್ನು ಮುಂದುವರೆಸಿದೆ ಎಂದು ಆರೋಪಿಸಿದರು.

WhatsApp Image 2024 08 27 at 08.48.14

ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಮಾಡುವುದಾಗಿ ಹೇಳುತ್ತಿದೆ. ರೈತರು ವಿದ್ಯುತ್ ಸಂಪರ್ಕ ಪಡೆಯುವಾಗಲೇ ಆಧಾರ ಕಾರ್ಡ್‌ ನೀಡಿರುತ್ತಾರೆ. ಉದ್ದೇಶ ಪೂರ್ವಕವಾಗಿ ರೈತರಲ್ಲಿ ಭಯ ಹುಟ್ಟಿಸಿ, ಬ್ಯಾಂಕ್ ಖಾತೆ ಮೂಲಕವೇ ವಿದ್ಯುತ್ ಬಿಲ್ ಪಡೆಯುವ ಹುನ್ನಾರ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಯಚೂರು | ಕೃಷಿ ಇಲಾಖೆ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು!

ಈಗಾಗಲೇ ಐದು ಕಂಪನಿಗಳಾಗಿ ಕೆಇಬಿ ವಿಗಂಡಿಸಲಾಗಿದೆ. ರೈತರು ವಿದ್ಯುತ್ ಕಂಬ್, ಮೀಟರ್, ಸಂಪರ್ಕ, ಟಿಸಿ ಪಡೆಯಲು ಹಣ ನೀಡಬೇಕಿದೆ. ಕಾರ್ಪೋರೇಟ್ ಕಂಪನಿಗಳಿಗೆ ವಿದ್ಯುತ್ ಕಂಪನಿಗಳನ್ನು ನೀಡಲು ಸರ್ಕಾರ ಪ್ರಯತ್ನ ನಡೆಸಿದೆ. ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀಡಿ ಖಂಡಿಸಿ ನಡೆಯಲಿರುವ ಹೋರಾಟದಲ್ಲಿ ರೈತರು ಭಾಗವಹಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಹನುಮಂತಪ್ಪ, ಬಸವರಾಜ, ಲಕ್ಷ್ಮಣ, ಅಮರೇಶ ಮೇಟಿ ಇನ್ನಿತರರು ಉಪಸ್ಥಿತರಿದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...