ರಾಯಚೂರು | ರಸ್ತೆ ದುರಸ್ತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Date:

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಬಾಗಲವಾಡ ಮುಖ್ಯರಸ್ತೆಯು ತೆಗ್ಗು ಗುಂಡಿಯಿಂದ ಕೆಸರುಮಯವಾಗಿ ಪೂರ್ತಿ ಹದಗೆಟ್ಟಿದ್ದು, ರಸ್ತೆ ದುರಸ್ತಿ ಮಾಡಿಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ದಲಿತ ಸಂಘರ್ಷ ಸಮಿತಿ (ಭೀಮವಾದ) ಸಿರವಾರ ತಾಲೂಕ ಘಟಕದಿಂದ ಅನಿರ್ಧಿಷ್ಟಾವದಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ರಸ್ತೆಗೆ 2 ಕೋಟಿ ಅನುದಾನ ಬಿಡುಗಡೆಯಾಗಿ 2 ವರ್ಷ ಕಳೆದರು ಕಾಮಗಾರಿ ಪ್ರಾರಂಭಿಸಿಲ್ಲ, ಚರಂಡಿ ಮತ್ತು ರಸ್ತೆ ನಿರ್ಮಾಣ, ರಸ್ತೆ ಅಗಲೀಕರಣ ಮಾಡಬೇಕೆಂದು ಒತ್ತಾಯಿಸಿದರು.

ಬಾಗಲವಾಡ ಗ್ರಾಮದ ಮುಖ್ಯ ರಸ್ತೆ ಕನಕ ಶ್ರೀ ಪೆಟ್ರೋಲ್ ಬಂಕ್ ನಿಂದ ಶಿವರಾಜ ಮಂತ್ರಿಕಿ ಇವರ ಮನೆಯವರೆಗೆ 2 ಕಿಲೋ ಮೀಟರ್‌ನವರೆಗೆ 2 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಹಿಂದಿನ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾದ ಶಾಮೀಲಪ್ಪ, ಗ್ರಾಮದ ಮುಖಂಡರು ಸೇರಿಕೊಂಡು ಗುದ್ದಲಿ ಪೂಜೆ ನೆರವೇರಿಸಿದ್ದರು. ಎರಡು ವರ್ಷ ಕಳೆದರೂ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ಬಾರಿ ರಸ್ತೆ ದುರಸ್ತಿ ಬಗ್ಗೆ ಸಾಕಷ್ಟು ಮನವಿ, ಅಧಿಕಾರಗಳ ಭೇಟಿ ಮಾಡಿದರೂ ಪ್ರಯೋಜನವಾಗಿಲ್ಲ. ಬಾಗಲವಾಡ ಗ್ರಾಮದಿಂದ ಕವಿತಾಳ, ಸಿರವಾರ ಹಾಗೂ ಇನ್ನಿತರ ಗ್ರಾಮಗಳಿಗೆ ಮುಖ್ಯ ರಸ್ತೆಯು ಪೂರ್ತಿ ಹದಗೆಟ್ಟು ಹೋಗಿದೆ. ದಿನನಿತ್ಯ ಶಾಲಾ ವಾಹನಗಳು , ಹಲವಾರು ವಾಹನಗಳು ಸಂಚರಿಸುತ್ತಿರುವುದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ.

ಮಳೆಗಾಲದ ಸಮಯದಲ್ಲಿ ರಸ್ತೆಯು ಕೆಸರು ಗದ್ದೆ, ತೆಗ್ಗುಗಳಲ್ಲಿ ನೀರು ನಿಂತು ಗುಂಡಿಗಳು ಕಾಣಿಸದೆ ಅಪಘಾತಗಳು ಸಂಭವಿಸಿವೆ. ಸಾರ್ವಜನಿಕರಿಗೆ ರಸ್ತೆ ಓಡಾಡಲು ಕಷ್ಟವಾಗಿದೆ. ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗೆ ಬಹಳಷ್ಟು ಸಮಸ್ಯೆ ಎದುರಾಗಿದೆ. ಆದ ಕಾರಣ ಅಧಿಕಾರಿಗಳು ರಸ್ತೆ ಅಗಲೀಕರಣ ಚರಂಡಿ ರಸ್ತೆ ನಿರ್ಮಾಣ ಕೂಡಲೆ ಪ್ರಾರಂಭಿಸಬೇಕೆಂದು ಒತ್ತಾಯಿಸಿ ಧರಣಿ ನಡೆಸಿದರು.

ಕೆಲವು ಹೊತ್ತಿನ ನಂತರ ಅಧಿಕಾರಿಗಳು ಧರಣಿನಿರತ ಭೇಟಿ ನೀಡಿ ಒಂದು ವಾರದೊಳಗೆ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆದರು.

ಮಲ್ಲನಗೌಡ ಪೋಲಿಸ್ ಪಾಟೀಲ್, ಅಮರೇಶ ಸಿಡಿ, ಬೀರಪ್ಪ ಸಾಹುಕಾರ, ಗುರುಪ್ಪ ಸಾಹುಕಾರ, ಅಮರೇಶ ನಾಯಕ. ಬಸವರಾಜ್ ದ್ಯಾವಣ್ಣರು, ಬಸವ ಸಿಡಿ, ಗಂಗಾಧರ ಬಾಗಲವಾಡ. ಮೌನೇಶ ಕೋರಿ, ನಾಗರಾಜ್ ಹಿಂದಿ ನಮನೆ, ಜಗದೀಶ ಸಾಲಮನಿ, ಮಹಾದೇವಪ್ಪ ಕೋರಿ, ನಾಗರಾಜ್ ಭೋವಿ. ಮೌಲಾಸಾಬ್ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...