ರಾಯಚೂರು | ದೇವದಾಸಿ ಮಹಿಳೆಯರಿಗೆ ಸೌಲಭ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

Date:

ಮಾಜಿ ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯವರ ವಿಮೋಚನಾ ಸಂಘ ಜಿಲ್ಲಾ ಸಮಿತಿಯ ವತಿಯಿಂದ ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಾಜಿ ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಮಾಡಬೇಕು, ಮನೆಗಳ ನಿರ್ಮಾಣ ಕಾರ್ಯ ಪೂರ್ಣ ಹಾಗೂ ಮುದಗಲ್ ಪಟ್ಟಣದ ಸರ್ವೆ ನಂ. 469/2 ರಲ್ಲಿ 15 ಜನ ಮಾಜಿ ದೇವದಾಸಿ ಮಹಿಳೆಯರಿಗೆ ಪುನರ್ ವಸತಿಗಳಿಗಾಗಿ ಭೂ ಮಂಜೂರಾತಿ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

ಮಾಜಿ ದೇವದಾಸಿ ಮಹಿಳೆಯರಿಗೆ ಕಳೆದ ಬಜೆಟ್ ಹೆಚ್ಚಿಸಿರುವ ₹500 ಸೇರಿದಂತೆ ₹2000 ಬಾಕಿ ಮೂರು ತಿಂಗಳ ಪಿಂಚಣಿ ಹಣ ಬಿಡುಗಡೆ ಮಾಡಬೇಕು. ಸರ್ವೆ ಪಟ್ಟಿಯಿಂದ ಕೈಬಿಟ್ಟು ಹೋದ ಮಾಜಿ ದೇವದಾಸಿ ಮಹಿಳೆಯರ ಸೇರ್ಪಡೆಗೆ ಮರು ಸಮೀಕ್ಷೆ ಮಾಡಲು ಆದೇಶ ನೀಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕ್‌ನಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಹಾಕುವುದನ್ನು ಕೈ ಬಿಟ್ಟು ಅನಕ್ಷರಸ್ಥರು ಇರುವುದರಿಂದ ನೇರವಾಗಿ ಇಲಾಖೆಯಿಂದಲೇ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಪಡೆದು, ಇಲಾಖೆಯಿಂದ ಸಿಗುವಂತಹ ಸಾಲ ಸೌಲಭ್ಯಗಳನ್ನು ಒದಗಿಸಬೇಕು. ರಾಯಚೂರು ನಗರದಲ್ಲಿ ಮನೆಗಳ ನಿರ್ಮಾಣ ಹಂತದಲ್ಲಿರುವ ಕಾರ್ಯವನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ‘ಈ ದಿನ’ ವರದಿಗೆ ಎಚ್ಚೆತ್ತ ತಾಲೂಕು ಆಡಳಿತ: ಗ್ಯಾಸ್ ಏಜೆನ್ಸಿಗೆ ನೋಟಿಸ್

ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ವಾರ್ಡ್‌ ನಂ. 16, 11ರಲ್ಲಿರುವ 15 ಜನ ದೇವದಾಸಿ ಮಹಿಳೆಯರಿಗೆ ಜಿಲ್ಲಾಧಿಕಾರಿಗಳು ಭೂ ಮಂಜೂರಾತಿ ನೀಡಿ ಪುನರ್ ವಸತಿ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷೆ ಹೆಚ್ ಪದ್ಮಾ, ಜಿಲ್ಲಾ ಗೌರವಾಧ್ಯಕ್ಷ ಕೆ.ಜಿ. ವೀರೇಶ್, ತಾಲೂಕಾಧ್ಯಕ್ಷೆ ಜಮಲಮ್ಮ, ಕಾರ್ಯದರ್ಶಿ ಮಹಾದೇವಿ, ಜಿಲ್ಲಾ ಕಾರ್ಯದರ್ಶಿ ಹೊಳೆಯಮ್ಮ ಕವಿತಾಳ, ಪರಶುರಾಮ ಲಿಂಗಸುಗುರು, ಹೊಸೂರಮ್ಮ ಸಿರವಾರ, ಸರೋಜಮ್ಮ ಮದ್ದಿನಾಳ, ಮರಿಯಮ್ಮ ಸಿಂಧನೂರು, ಮೋನಮ್ಮ ಬಳಗನೂರು ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...