ರಾಯಚೂರು | ಮೂಲಭೂತ ಸೌಕರ್ಯ ಕಲ್ಪಿಸಿ, ದೇವತಗಲ್‌ ಗ್ರಾಮಸ್ಥರ ಆಗ್ರಹ

Date:

ರಾಯಚೂರು ಜಿಲ್ಲೆಯ ದೇವತಗಲ್‌ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಗ್ರಾಮದಲ್ಲಿ ಸಮರ್ಪಕವಾದ ರಸ್ತೆಗಳಿಲ್ಲ, ಚರಂಡಿ ವ್ಯವಸ್ಥೆ ಇಲ್ಲದೇ ಗ್ರಾಮದಲ್ಲಿ ಸ್ವಚ್ಛತೆಯ ಕೊರತೆ ಇದೆ.

ಈ ಗ್ರಾಮದಲ್ಲಿ 1500 ಜನಸಂಖ್ಯೆ ಇದೆ. ಎರಡು ಕೊಳವೆಬಾವಿಗಳಿಂದ ಗ್ರಾಮಕ್ಕೆ ನೀರು ಪೂರೈಕೆ ಮಾಡಲಾಗುತ್ತಿದೆ. ಓಣಿಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಿದ್ದರೂ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಮೇಲೆ ನೀರು ಹರಿಯುತ್ತದೆ.

ಗ್ರಾಮದ ಅಗಸಿ ಹತ್ತಿರ ಮತ್ತು ಜನತಾ ಕಾಲನಿಯಲ್ಲಿ ಬಟ್ಟೆ ಮತ್ತು ಪಾತ್ರೆ ತೊಳೆದ ನೀರು, ಬಚ್ಚಲು ನೀರು ರಸ್ತೆಯಲ್ಲಿ ನಿಂತು ಕೆಸರು ಗದ್ದೆಯಂತಾಗಿದೆ. ಗಲೀಜು ನೀರಿನಿಂದ ಸೊಳ್ಳೆಗಳ ಕಾಟ ಹೆಚ್ಚಿದ್ದು, ಸುತ್ತಮುತ್ತ ವಾಸಿಸುವ ಕುಟುಂಬಗಳ ನಿದ್ದೆಗೆಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಗಲು ಹೊತ್ತಿನಲ್ಲಿ ಜಮೀನಿಗೆ ಕೆಲಸಕ್ಕೆ ಹೋಗುತ್ತೇವೆ. ಸಂಜೆ ಮನೆಗೆ ಬಂದರೆ ಗಲೀಜು ವಾತಾವರಣದಲ್ಲಿರಬೇಕು. ಗಬ್ಬು ವಾಸನೆ ಮತ್ತು ಸೊಳ್ಳೆಗಳ ಕಾಟ. ನೆಮ್ಮದಿಯಾಗಿ ನಿದ್ರೆ ಮಾಡುವಂತಿಲ್ಲ. ಹೆಚ್ಚಿದ ಸೊಳ್ಳೆ ಕಾಟದಿಂದ ಜನ ಜಾನುವಾರುಗಳು ಚಡಪಡಿಸುವಂತಾಗಿದೆ ಎಂದು ಗ್ರಾಮದ ಮಹಿಳೆಯರು ತಮ್ಮ ಅಳಲು ತೋಡಿಕೊಳ್ಳುತ್ತಾರೆ.

ಗ್ರಾಮಕ್ಕೆ ಬೆಳಗ್ಗೆ ಮತ್ತು ಸಂಜೆ ದಿನದಲ್ಲಿ ಎರಡು ಬಾರಿ ಬಸ್ ಬಂದರೂ ಲಿಂಗಸುಗೂರು, ಸಿರವಾರ ಮತ್ತು ಕವಿತಾಳ ಪಟ್ಟಣಗಳಿಗೆ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಗೊಲ್ದಿನ್ನಿ ಕ್ರಾಸ್‌ವರೆಗೆ ಅಂದಾಜು 3 ಕಿ.ಮೀ ಕಾಲ್ನಡಿಗೆ ಅನಿವಾರ್ಯವಾಗಿದೆ.

ಗ್ರಾಮಕ್ಕೆ ಬೆಳಗ್ಗೆ 6 ಗಂಟೆಗೆ ಬಸ್ ಬರುವುದರಿಂದ ಮಕ್ಕಳಿಗೆ ಅನುಕೂಲವಾಗುತ್ತಿಲ್ಲ. ದೇವತಗಲ್ ಮತ್ತು ಗೊಲ್ದಿನ್ನಿ ಗ್ರಾಮಗಳಿಂದ ಅಂದಾಜು 40 ವಿದ್ಯಾರ್ಥಿಗಳು ನಿತ್ಯ ಶಾಲಾ ಕಾಲೇಜಿಗೆ ಹೋಗುತ್ತಾರೆ. ಶಾಲೆಗೆ ಹೋಗುವಾಗ ಮತ್ತು ಸಂಜೆ ಮನೆಗೆ ಬರುವಾಗ ನಿತ್ಯ ನಡೆದುಕೊಂಡು ಬರುತ್ತಾರೆ. ಶಾಲಾ, ಕಾಲೇಜು ಸಮಯಕ್ಕೆ ಸರಿಯಾಗಿ ಬಸ್ ಓಡಿಸಿದರೆ ಅನುಕೂಲವಾಗುತ್ತದೆ ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಕಾಂಕ್ರಿಟ್ ರಸ್ತೆ ನಿರ್ಮಿಸುವಾಗಲೇ ಸ್ವಲ್ಪ ಎತ್ತರಿಸುವಂತೆ ಮನವಿ ಮಾಡಿದರೂ ಅಧಿಕಾರಿಗಳು ಗಮನಹರಿಸಲಿಲ್ಲ. ಈಗ ರಸ್ತೆಯಲ್ಲಿ ನೀರು ನಿಂತು ಗಲೀಜು ಉಂಟಾಗುತ್ತಿದೆ. ಓಣಿಗಳಲ್ಲಿ ಚರಂಡಿ ನಿರ್ಮಾಣ ಮತ್ತು ಸರ್ಕಾರಿ ಶಾಲೆಗೆ ಕಾಂಪೌಂಡ್ ನಿರ್ಮಾಣ ಮಾಡುವಂತೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ಮೂವರು ಸದಸ್ಯರಿದ್ದಾರೆ ಆದರೂ, ಈ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸುತ್ತಿದ್ದಾರೆ ಜನರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...