ರಾಯಚೂರು | ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ನೀಡಿ; ಎಐಆರ್‌ಎಸ್ ಒತ್ತಾಯ

Date:

ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸಬೇಕೆಂದು ಎಐಆರ್‌ಎಸ್ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

ಈ ವೇಳೆ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಅಜೀಜ್ ಜಾಗೀರ್ದಾರ್, ಜಿಲ್ಲಾದ್ಯಂತ ಕಾಲೇಜು ಹೋಗುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗ್ತಿದೆ. ಬಸ್ಸುಗಳು ಸರಿಯಾದ ಸಮಯಕ್ಕೆ ಬಾರದ ಕಾರಣ, ವಿದ್ಯಾರ್ಥಿಗಳು ಬಸ್‌ಗಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿರಬಹುದು. ಆದರೆ, ಇಲಾಖೆಯ ನಿರ್ವಹಣೆ ಹಾಗೂ ಅನೇಕ ನ್ಯೂನತೆಗಳಿಂದ ವಿದ್ಯಾರ್ಥಿಗಳು, ಯುವಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ‌ ಅವಕಾಶ ಕೊಡುವುದರ ಜೊತೆಗೆ, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನೇಕ ಬಸ್‌ಗಳು ಮಹಿಳೆಯರಿಂದ ತುಂಬಿ‌ ತುಳುಕುತ್ತಿರುವ ಕಾರಣ ಕಾಲೇಜಿನ ವಿದ್ಯಾರ್ಥಿಗಳಿಗೆ ಆಸನಗಳು ಹಾಗೂ ಬಸ್ ಸೌಲಭ್ಯ ಸಿಗುವುದಿಲ್ಲ. ಅನೇಕ ಬಾರಿ ವಿದ್ಯಾರ್ಥಿಗಳು ನಿಂತುಕೊಂಡೇ ಪ್ರಯಾಣಿಸಬೇಕು.‌ ಅಲ್ಲದೇ ಅನೇಕ ಬಸ್ ನಿಲ್ದಾಣಗಳಲ್ಲಿ ಚಾಲಕರು ಬಸ್‌ ನಿಲ್ಲಿಸದೇ ಬೇಜವಾಬ್ದಾರಿ ತೋರುತ್ತಿದ್ದಾರೆ” ಎಂದು ದೂರಿದರು.

ಸಾರಿಗೆ ಇಲಾಖೆಯಿಂದ ಕಾಲೇಜಿನ ವಿದ್ಯಾರ್ಥಿಗಳ ಸಮಸ್ಯೆಗೆ ಮುಕ್ತಿ ನೀಡಬೇಕಿದೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು. ಹಳ್ಳಿಗಳಿಗೂ ಸೂಪರ್ ಬಸ್ಸುಗಳನ್ನು ಕಲ್ಪಿಸಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು ಎಂದು  ಒತ್ತಾಯಿಸಿದ್ದಾರೆ.

ಈ ವೇಳೆ ಜಿ.ಅಮರೇಶ್, ನಿರಂಜನ್ ಕುಮಾರ್, ಲಕ್ಷ್ಮಣ್, ಇನ್ನಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...