ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಅರುಣ್ ಕುಮಾರ್ ರಾಠೋಡ ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲೂಕಿನ ಮುರಾನಪುರ ಬಳಿ ಭಾನುವಾರ ಮಧ್ಯರಾತ್ರಿ ಅಪಘಾತಕ್ಕೀಡಾಗಿ ಐವರು ಗಾಯಗೊಂಡಿದ್ದಾರೆ.
ಮುರಾನಪುರ ಸಮೀಪ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಿಎಸ್ಐ ಅರುಣ್ ಕುಮಾರ್ ರಾಠೋಡ ಅವರಿಗೆ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರ ಪತ್ನಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ಗಾಯಾಳುಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕೂಡ್ಲಿಗಿಯಲ್ಲಿ ನಡೆದ ಮುಖ್ಯಮಂತ್ರಿ ಕಾರ್ಯಕ್ರಮದ ಬಂದೊಬಸ್ತು ಕರ್ತವ್ಯಕ್ಕೆ ತೆರಳಿದ್ದ ಪಿಎಸ್ಐ, ಕುಟುಂಬದವರೊಡನೆ ಖಾಸಗಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆಎಸ್‌ಆರ್‌ಟಿಸಿ ಬಸ್ ಹರಿದು ಓರ್ವ ಬಾಲಕ ಸಾವು, ಇನ್ನೊರ್ವ ಗಂಭೀರ ಗಾಯ
ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





