ರಾಯಚೂರು | ಒಳಮೀಸಲಾತಿ ಜಾರಿಗಾಗಿ ಅರೆಬೆತ್ತಲೆ ಪ್ರತಿಭಟನೆ

Date:

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ರಾಯಚೂರು ನಗರದ ಡಾ. ಬಿ. ಆರ್ ಅಂಬೇಡ್ಕರ್ ವೃತ್ತದಲ್ಲಿ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಾದಿಗ ಸಮಾಜದ ಮುಖಂಡರು ಅರೆಬೆತ್ತಲೆಯಾಗಿ ಬೃಹತ್ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಒಂದು ತಾಸಿಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ನಂತರ ಅರೆಬೆತ್ತಲೆಯಾಗಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಸುಪ್ರಿಂಕೋರ್ಟ್ ಒಳ ಮೀಸಲಾತಿ ಜಾರಿಗೆ ನಿರ್ದೇಶನ ನೀಡಿದ್ದರೂ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಒಳ ಮೀಸಲಾತಿ ಹೋರಾಟ ಸಮಿತಿ ಸಂಚಾಲಕ ಎಂ.ವಿರುಪಾಕ್ಷಿ ಮಾತನಾಡಿ, ಒಳಮೀಸಲಾತಿಗಾಗಿ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ರಾಜ್ಯ ಸರ್ಕಾರ ಕಾಲಹರಣ‌ ಮಾಡಿ ಸಮಾಜವನ್ನು ನಿರ್ಲಕ್ಷ್ಯ ವಹಿಸಿದೆ. ಮುಂದಿನ 15 ದಿನಗಳಲ್ಲಿ ಒಳಮೀಸಲಾತಿ ಜಾರಿ ಮಾಡದಿದ್ದರೆ ಮಾದಿಗ ಸಮುದಾಯದ 10 ರಿಂದ 15 ಲಕ್ಷ ಜನರು ಇಡೀ ಬೆಂಗಳೂರಿಗೆ ಮುತ್ತಿಗೆ ಹಾಕಿ ಬೆಂಗಳೂರು ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನೋರ್ವ ಮುಖಂಡ ಜೆ.ಬಿ. ರಾಜು ಮಾತನಾಡಿ, ಹರಿಯಾಣ, ತೆಲಂಗಾಣ, ಆಂದ್ರಪ್ರದೇಶ ಸರ್ಕಾರಗಳು ಈಗಾಗಲೇ ಒಳ ಮೀಸಲಾತಿ ಜಾರಿಗೊಳಿಸಿದ್ದು, ಕೂಡಲೇ ರಾಜ್ಯ ಸರ್ಕಾರ ಕಾಲಹರಣ ಮಾಡದೇ ಜಾರಿಗೊಳಿಸಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜ್ವಲಂತ ಸಮಸ್ಯೆಗಳ ನಿರ್ಲಕ್ಷ್ಯ- ಸಿಎಂಗೆ ಘೇರಾವ್ : ಆರ್. ಮಾನಸಯ್ಯ

ಪ್ರತಿಭಟನೆಯಲ್ಲಿ ಪ್ರಮುಖರಾದ ರವೀಂದ್ರ ಜಲ್ದಾರ್, ರಾಮಣ್ಣ, ತಿಮ್ಮಪ್ಪ ಪಿರಂಗಿ, ಪಿ.ಎಲ್ಲಪ್ಪ, ಜೆ.ತಿಮ್ಮಪ್ಪ, ಶಂಶಾಲಂ, ಎಸ್.ರಾಜು, ಈರಣ್ಣ ಭಂಡಾರಿ, ಚಂದ್ರು ಭಂಡಾರಿ, ಎಂ.ಕೆ.ನಾಗರಾಜ, ಸತ್ಯನಾಥ, ಭೀಮಣ್ಣ ಮಂಚಾಲ, ಅನೀಲ್ ಕುಮಾರ, ರಂಜಿತ್ ದಂಡೋರಾ, ದುಳ್ಳಯ್ಯ ಗುಂಜಳ್ಳಿ, ಮಾನಪ್ಪ ಮೇಸ್ತ್ರಿ, ನರಸಪ್ಪ ಆಶಾಪೂರ, ಆಂಜನೇಯ ಕುರುಬದೊಡ್ಡಿ, ಸತೀಶ, ಮೌನೇಶ, ರವಿಕುಮಾರ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...