ರಾಯಚೂರು | ಮನೆಯ ಬೀಗ ಮುರಿದು ₹2 ನಗದು, 10 ತೊಲ ಬಂಗಾರ ಕಳ್ಳತನ

Date:

ಮನೆಯ ಬೀಗ ಮುರಿದು 10 ತೊಲ ಚಿನ್ನ ಮತ್ತು ಎರಡು ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮೀಕಾಂತ ಎಂಬುವವರ ಮನೆಯಲ್ಲಿ ನಿನ್ನೆ ಮಧ್ಯರಾತ್ರಿ ಕಳ್ಳತನ ಸಂಭವಿದೆ ಎನ್ನಲಾಗಿದೆ.

ಲಕ್ಷ್ಮೀಕಾಂತ ಕುಟುಂಬದೊಂದಿಗೆ ಪಕ್ಕದ ಯಾಪಲಪರ್ವಿ ಗ್ರಾಮದ ಜಾತ್ರೆಗೆ ಹೋಗಿದನ್ನು ಗಮನಿಸಿದ ಖದೀಮರು ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಮನೆಬೀಗ ಮುರಿದು, ಒಳನುಗ್ಗಿದ್ದು, ಬೀರುವಿನ ಬೀಗ ಮುರಿದು ಹತ್ತು ತೊಲ ಬಂಗಾರ ಎರಡು ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.

ವಿಷಯ ತಿಳಿದ ಕೂಡಲೇ 112ಕ್ಕೆ ಮನೆ ಮಾಲೀಕರು ಕರೆ ಮಾಡಿದ ಬಳಿಕ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಘಟನಾ ಸ್ಥಳಕ್ಕೆ ಪಿ.ಐ ವಿಎಸ್‌ಹೀರೇಮಠ, ಶ್ವಾನದಳ ಪೋಲಿಸರು, ಬೆರಳಚ್ಚು ತಂತ್ರಜ್ಞರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...