ಮನೆರೇಗಾ ಯೋಜನೆಯಡಿ ಕಳೆದ ಮಾರ್ಚ್ ತಿಂಗಳಲ್ಲಿ ಕೆಲಸ ಮಾಡಿದ 1800 ಕ್ಕೂ ಹೆಚ್ಚು ಕಾರ್ಮಿಕರಿಗೆ ಇನ್ನೂ ಕೂಲಿ ಹಣ ಪಾವತಿಯಾಗಿಲ್ಲ. ಇದೇ ರೀತಿ, ಸೆಪ್ಟೆಂಬರ್ ತಿಂಗಳಲ್ಲಿ ಕೆಲಸ ನಿರ್ವಹಿಸಿದ 720 ಕಾರ್ಮಿಕರಿಗೂ ವೇತನ ಬಾಕಿಯೇ ಉಳಿದಿದೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಗ್ರಾಮೀಣ ಕೂಲಿಕಾರರ ಸಂಘಟನೆಯ ಕಾರ್ಯಕರ್ತರು ಬಾಗಲವಾಡ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.
ಮನರೇಗಾ ಯೋಜನೆಯ ಸಮರ್ಪಕ ಅನುಷ್ಠಾನ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಮತ್ತು ಕರವಸೂಲಿ ಖಾತೆಯಲ್ಲಿ ನಡೆದಿರುವಂತ ಅನೇಕ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದರು. ಕೆಲಸ ಮಾಡಿದ್ದಕ್ಕೆ ಕೂಲಿ ಸಿಗದಿದ್ದರೆ ಕುಟುಂಬವನ್ನು ಹೇಗೆ ಸಾಗಿಸಬೇಕು?” ಎಂದು ಪ್ರಶ್ನಿಸಿದರು. ಹಲವು ಬಾರಿ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಿತ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಗಲಿಲ್ಲ ಎಂದು ಕಾರ್ಮಿಕರು ಆರೋಪಿಸಿದರು.
ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಹಾಗೂ ಬಾಕಿ ಹಣ ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ ಪಡೆದ ಕವಿತಾಳ ಠಾಣೆ
ಪ್ರತಿಭಟನೆಯಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆಯ ಮುಖಂಡ ಅಮರೇಶ ಬಾಗಲವಾಡ, ಈರಮ್ಮ, ಹುಸೇನಪ್ಪ, ಬೀರಪ್ಪ,ನಾಗರಾಜ, ರಮೇಶ, ರಂಗಣ್ಣ ಇನ್ನಿತರರು ಹಾಜರಿದ್ದರು.





