ರಾಯಚೂರು | ಗಾಂಜಾ ಚಾಕೊಲೇಟ್‌ ಮಾರಾಟ; ಇಬ್ಬರು ಆರೋಪಿಗಳ ಬಂಧನ

Date:

ಉತ್ತರಪ್ರದೇಶದಲ್ಲಿ ತಯಾರಿಸಿದ ಗಾಂಜಾ ಚಾಕೊಲೇಟ್‌ಗಳನ್ನು ರಾಯಚೂರಿನಲ್ಲಿ ಮಾರಾಟ ಮಾಡಲಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆಯ ಅಧಿಕಾರಿಗಳು ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಅರೋಪಿಗಳನ್ನು ಬಂಧಿಸಿ ಗಾಂಜಾ ಚಾಕೊಲೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಚಯ್ಯ ಸ್ವಾಮಿ ಹಾಗೂ ಅಂಬರಯ್ಯ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದ್ದು, ಚಾಕೊಲೇಟ್‌ನಂತೆ ಗಾಂಜಾ ತಯಾರಿಸಿ 6 ಗ್ರಾಂ ತೂಕದ ಗಾಂಜಾ ಚಾಕೊಲೇಟ್‌ಗಳನ್ನು ₹30, ₹50, ₹400ಕ್ಕೆ ಅಂಗಡಿಗಳಲ್ಲಿಯೇ ಮಾರಾಟ ಮಾಡಲಾಗುತ್ತಿತ್ತು. ನಗರದ ಎಲ್‌ಬಿಎಸ್ ನಗರ ಬಡಾವಣೆ ಮತ್ತು ಕೈಗಾರಿಕಾ ಪ್ರದೇಶದ ಏರಿಯಾಗಳಲ್ಲಿ ಹಲವು ದಿನಗಳಿಂದ ಯಾವುದೇ ಅನುಮಾನ ಬಾರದ ರೀತಿಯಲ್ಲಿ ಗಾಂಜಾ ಮಾರಾಟ ಮಾಡಲಾಗುತಿತ್ತು ಎನ್ನಲಾಗಿದೆ.

ಗಾಂಜಾ ಮಾರಾಟದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಶ್ರೀಪಾನಾ ಮುನಾಕಾ, ಶ್ರೀ ಆನಂದ ಮುನಾಕಾ ಚಾಕೊಲೇಟ್ ಪತ್ತೆಯಾಗಿವೆ. ಒಟ್ಟು 482 ಗಾಂಜಾ ಚಾಕೊಲೇಟ್‌ಗಳನ್ನು ಜಪ್ತಿಪಡಿಸಿಕೊಳ್ಳಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಒತ್ತುವರಿ ತೆರವಿಗೆ ಆಗ್ರಹ

ಅಬಕಾರಿ ಪೊಲೀಸರು ಬಂಧಿತ ಆರೋಪಿಗಳಿಂದ ಮಾಹಿತಿ ಕಲೆಹಾಕಿದ್ದು, ಮೂಲ ಹುಡುಕಾಟ ನಡೆಸಿದ್ದಾರೆ. ಸದ್ಯ ರಾಯಚೂರಿನ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ವಾಲೆಂಟಿಯರ್‌ ಹಫೀಜುಲ್ಲಾ ಮಹಿತಿ ಆಧರಿಸಿದ ವರದಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...