ರಾಯಚೂರು | ಸಮರ್ಪಕ ಬಸ್‌ ವ್ಯವಸ್ಥೆಯಿಲ್ಲದೆ ಶಾಲಾ ಮಕ್ಕಳ ಪರದಾಟ; ರಸ್ತೆ ತಡೆದು ಪ್ರತಿಭಟನೆ

Date:

ರಾಯಚೂರು ಜಿಲ್ಲೆಯ ಸಿರವಾರ ನಗರದಲ್ಲಿ ಸಮಯಕ್ಕೆ ಸರಿಯಾಗಿ ಬಸ್‌ ವ್ಯವಸ್ಥೆಯಿಲ್ಲದೆ ಶಾಲಾ ಮಕ್ಕಳು ಪರದಾಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಂಧುತ್ವ ವೇದಿಕೆ ನೇತೃತ್ವದಲ್ಲಿ ಶಾಲೆ ಕಾಲೇಜು ವಿದ್ಯಾರ್ಥಿಗಳು ದಿಢೀರ್‌ ರಸ್ತೆ ತಡೆ ಪ್ರತಿಭಟನೆ ನಡೆಸಿದರು.

“ಸಿರವಾರ ತಾಲೂಕಿನಿಂದ ನಿತ್ಯವೂ ನೂರಾರು ಮಂದಿ ಮಕ್ಕಳು ರಾಯಚೂರು ಜಿಲ್ಲಾ ಕೇಂದ್ರಕ್ಕೆ ಉನ್ನತ ವ್ಯಾಸಂಗಕ್ಕೆ ತೆರಳುತ್ತಾರೆ. ಸರಿಯಾದ ಸಮಯಕ್ಕೆ ಬಸ್ ಇಲ್ಲದ ಕಾರಣ ಪರದಾಡುವಂತ ಸ್ಥಿತಿ ಎದುರಾಗಿದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಪ್ರತಿಭಟನೆ 1

ವಿದ್ಯಾರ್ಥಿ ಬಂಧುತ್ವ ವೇದಿಕೆಯ ಮುಖಂಡ ಮೇಸಕ್ ದೊಡ್ಡಮನಿ ಮಾತನಾಡಿ, “ಸಮರ್ಪಕ ಬಸ್‌ಗಳನ್ನು ಬಿಡದ ಕಾರಣ ಹಾಗೂ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸದಿರುವ ಕಾರಣಕ್ಕೆ ಬೇಸತ್ತಿದ್ದ ವಿದ್ಯಾರ್ಥಿಗಳು ಏಕಾಏಕಿ ರಸ್ತೆಗಿಳಿದು ಪ್ರತಿಭಟನೆ ಕೈಗೊಳ್ಳಲಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆಂಗಲ್ ಚಂಡಮಾರುತ; ರಾಜ್ಯದಲ್ಲಿ ಡಿ.5ರವರೆಗೆ ಭಾರೀ ಮಳೆ

“ಸಿರವಾರ ತಾಲೂಕು ಭಾಗದಿಂದ ಸುತ್ತಮುತ್ತಲ ಹಳ್ಳಿಗಳಿಂದ ಸುಮಾರು 500ರಿಂದ 600ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಹೆಚ್ಚಿನ ವ್ಯಾಸಂಗಕ್ಕೆ ಜಿಲ್ಲಾ ಕೇಂದ್ರವಾದ ರಾಯಚೂರಿಗೆ ತೆರಳುತ್ತಾರೆ. ಜಿಲ್ಲೆಯ ಗಡಿಭಾಗ ಜಿಲ್ಲಾವಾದ್ದರಿಂದ ಬೇರೆ ರಾಜ್ಯಕ್ಕೆ ತೆರಳುವ ಬಸಗಳು ಇದ್ದರೂ ಇಲ್ಲದಂತಾಗಿದೆ. ಗಡಿಭಾಗ ಆಂಧ್ರಕ್ಕೆ ಹೋಗುವ ಕೆಲವು ಬಸ್‌ಗಳನ್ನು ನಿಲ್ಲಿಸಲು ಹಿಂದೇಟು ಹಾಕುತ್ತಾರೆ” ಎಂದು ಆರೋಪಿಸಿದರು.

“ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿಲಾಯಿತು. ಬಳಿಕ ಪೊಲೀಸರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರ್ಯಾಯ ಬಸ್ ವ್ಯವಸ್ಥೆ ಕಲ್ಪಿಸಿ ಮಕ್ಕಳಿಗೆ ಸುಲಭಗೊಳಿಸಿದರು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...