ರಾಯಚೂರು | ಎಸ್‌ಡಿಪಿಐ ಕೇವಲ ಪಕ್ಷವಲ್ಲ, ಶೋಷಿತರ ಪ್ರತಿಧ್ವನಿ : ಅಪ್ಸರ್‌ ಕೂಡ್ಲಿಪೇಟೆ

Date:

ಎಸ್‌ಡಿಪಿಐ ಕೇವಲ ರಾಜಕೀಯ ಪಕ್ಷವಲ್ಲ, ಇದು ಶೋಷಿತರ ಕೂಗಿನ ಪ್ರತಿಧ್ವನಿ, ಸಾಮಾನ್ಯ ಜನರ ಕನಸುಗಳ ಪ್ರತೀಕ ಎಂದು ಎಸ್‌ ಡಿಪಿಐ ಪಕ್ಷದ ರಾಜ್ಯ ಮುಖಂಡರಾದ ಅಪ್ಸರ್‌ ಕೂಡ್ಲಿಪೇಟೆ ಹೇಳಿದರು.

ಲಿಂಗಸೂಗೂರು ತಾಲ್ಲೂಕು ಮುದಗಲ್‌ ಪಟ್ಟಣದ ಶಾದಿಮಹಲ್‌ನಲ್ಲಿ ನಡೆದ ನಾಯಕರ ಸಭೆಯಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.

ಶೋಷಿತ ಜನರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಬಡವರು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ನೊಂದ ಜನರ ಹಕ್ಕುಗಳಿಗಾಗಿ ನಮ್ಮ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ, ಸುಳ್ಳು ಕೇಸುಗಳು ಮತ್ತು ಬಂಧನಗಳನ್ನು ಎದುರಿಸುತ್ತಿದ್ದರೂ ಹೋರಾಟವನ್ನು ನಿಲ್ಲಿಸಿಲ್ಲ. ಹೋರಾಟವೇ ನಮ್ಮ ಬದ್ಧತೆಯ ನಿಜವಾದ ಸಾಕ್ಷಿ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬದಲಾವಣೆಯ ಹಾದಿ ದೀರ್ಘ ಮತ್ತು ಕಠಿಣವಾದದ್ದಾಗಿದ್ದರೂ ಇದು ಪ್ರತಿಯೊಬ್ಬರ ಜವಾಬ್ದಾರಿ. ನ್ಯಾಯ, ಸಮಾನತೆ ಮತ್ತು ಸಹೋದರತ್ವವನ್ನು ಸ್ಥಾಪಿಸಲು ನಂಬಿಕೆ, ಶ್ರಮ ಮತ್ತು ಬದ್ಧತೆ ಅಗತ್ಯ. ನಮ್ಮ ಸದಸ್ಯರು ತಮ್ಮ ಸಮಯ, ಶಕ್ತಿ ಮತ್ತು ಸಂಪನ್ಮೂಲಗಳನ್ನು ಸಮಾಜಮುಖಿ ಹೋರಾಟಗಳಿಗೆ ಸಮರ್ಪಿಸಬೇಕು. ಸಮಾಜದಲ್ಲಿ ಬದಲಾವಣೆಯನ್ನು ತರಲು ಕೇವಲ ಕನಸು ಕಾಣುವುದರಿಂದ ಪ್ರಯೋಜನ ಇಲ್ಲ, ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಯನ್ನು ನೀಡಿದಾಗ ಮಾತ್ರ ಬದಲಾವಣೆ ಸಾಧ್ಯ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಕಳ್ಳತನ ಪ್ರಕರಣ ; ನಾಲ್ವರಿಗೆ 10 ವರ್ಷ ಜೈಲು ಶಿಕ್ಷೆ

ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಪಾಷ ಕಡ್ಡಿಪುಡಿ, ಪ್ರಧಾನ ಕಾರ್ಯದರ್ಶಿ ಮೀರ್ ಅಲಿ, ಜಿಲ್ಲಾ ಸಮಿತಿ ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಸೇರಿದಂತೆ ಅನೇಕ ನಾಯಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...