ರಾಯಚೂರು | ಅತ್ಯಾಚಾರ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಸೆ.30ರಂದು ಯಾದಗಿರಿ ಬಂದ್‌ಗೆ ಕರೆ

Date:

ಅಪ್ರಾಪ್ತ ಮಾದಿಗ ಸಮಾಜದ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಎಸಗಿದವರ ಬಂಧಿಸದೆ ಮೃದು ಧೋರಣೆ ತೋರುತ್ತಿರುವುದನ್ನು ಖಂಡಿಸಿ ಸೆ.30 ರಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಯಾದಗಿರಿ ಬಂದ್ ನಡೆಸಲಾಗುತ್ತಿದೆ ಎಂದು ಸಮಿತಿಯ ರಾಯಚೂರು ತಾಲೂಕು ಅಧ್ಯಕ್ಷ ದುಳ್ಳಯ್ಯ ಗುಂಜಹಳ್ಳಿ ಹೇಳಿದರು.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ಮತ್ತು ಕೊಡೆಕಲ್ ಗ್ರಾಮದಲ್ಲಿ ಕೆಲವು ದಿನ ಹಿಂದೆ ಅತ್ಯಾಚಾರ ಎಸಗಿ ಹಾಗೂ ಸಾಮಾಜಿಕ ಬಹಿಷ್ಕಾರ ಹಾಕಿದ ಆರೋಪಿಗಳನ್ನು ಬಂಧಿಸಿಲ್ಲ.ಆರೋಪಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ. ಹೀಗಾಗಿ ಯಾದಗಿರಿ ಬಂದ್‌ಗೆ ಕರೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಜನರ ರಕ್ಷಿಸುವಲ್ಲಿ ವಿಫಲವಾಗಿದೆ. ಘಟನೆ ನಡೆದು 15 ದಿನಗಳ ಕಳೆದರೂ ಯಾವೊಬ್ಬ ಆರೋಪಿಯನ್ನು ಬಂಧಿಸಿಲ್ಲ. ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತಗಳು ಜನರ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನೇಕ ಬಾರಿ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಗಮನ ಸೆಳೆದರೂ ಯಾವ ಪ್ರಯೋಜನವಾಗಿಲ್ಲ. ಸಾಮಾಜಿಕ ಬಹಿಷ್ಕಾರವಾದರೂ ಪೊಲೀಸರು ಶಾಂತಿಸಭೆ ಹೊರತುಪಡಿಸಿದರೆ ಯಾವುದೇ ಕಠಿಣ ಕ್ರಮ ಜರುಗಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು .

ಗೃಹ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವರು ಘಟನೆಗೂ ತಮಗೂ ಯಾವುದೇ ಸಂಬಂಧವಿಲ್ಲದಂತೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಯಾದಗಿರಿ ಬಂದ್ ಗೆ ಬೆಂಬಲಕ್ಕೆ ಸುಮಾರು ಸಂಘಟನೆಗಳು , ಸಂಸ್ಥೆಗಳು , ಹಾಗೂ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಘಟಕದ ಜಿಲ್ಲಾಧ್ಯಕ್ಷ ರಂಜಿತ್ ದಂಡೋರ, ರಾಜ್ಯ ಕಾರ್ಯದರ್ಶಿ ಸುರೇಶ ದುಗನೂರು, ಜಕ್ರಪ್ಪ ಹಂಚಿನಾಳ, ಹನುಮಂತ ಜುಲಮಗೇರಾ, ಮಾರುತಿ ಮರ್ಚಟ್ಹಾಳ, ಪ್ರಸಾದ ಗಾಣಧಾಳ, ನರಸಿಂಹ ತಲಮಾರಿ, ಪ್ರಭು ತಲಮಾರಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...