ರಾಯಚೂರು | ವಸತಿ ನಿಲಯದ ಗುತ್ತಿಗೆ ನೌಕರರಿಗೆ ಸಿಗದ ಏಳು ತಿಂಗಳ ವೇತನ

Date:

ವಸತಿ ನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಏಳು ತಿಂಗಳ ವೇತನ ಪಾವತಿ ಮಾಡದೇ ಇರುವ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮೇಲೆ ಕ್ರಮ ಜರುಗಿಸಿ, ಬಾಕಿ ವೇತನ ಮಂಜೂರಿಗೆ ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿತು.

‘ನಗರದ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕಳೆದ ಏಳು ತಿಂಗಳುಗಳಿಂದ ವೇತನ ಪಾವತಿ ಮಾಡಿಲ್ಲ. ಇದರಿಂದ ಜೀವನ ನಡೆಸಲು ಕಷ್ಟಕರವಾಗಿದೆ. ದಶಕಗಳಿಂದ ವಸತಿ ನಿಲಯಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿ, ವೇತನದ ಕುರಿತು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೆ ಕೇಳಿದರೆ ಸರಿಯಾಗಿ ಸ್ಪಂದಿಸುತ್ತಿಲ್ಲ’ ಎಂದು ಅವರು ದೂರಿದರು.

ಆರ್.ಆರ್.ಕಾಲೋನಿಯ ಸರ್ಕಾರಿ ಪಿಯು ಬಾಲಕರ ವಸತಿ ನಿಲಯ, ಬಿಜ್ಜನಗೇರಾ ರಸ್ತೆಯಲ್ಲಿರುವ  ಸರ್ಕಾರಿ ಪದವಿ ಪೂರ್ವ ಬಾಲಕರ ವಸತಿ ನಿಲಯ, ಸರ್ಕಾರಿ ವೃತ್ತಿಪರ ಬಾಲಕರ ವಸತಿ ನಿಲಯ, ವೃತ್ತಿಪರ ಬಾಲಕಿಯರ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯಲ್ಲಿ 180 ಜನಕ್ಕೆ ಕಳೆದ ಏಳು ತಿಂಗಳಿಂದ ವೇತನ ಮಂಜೂರಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಂಡು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವೇತನವನ್ನು ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಾಧ್ಯಕ್ಷ ಎಸ್. ರಾಜು, ನಗರಸಭೆ ಮಾಜಿ ಸದಸ್ಯ ಮಂಚಾರ ಭೀಮಣ್ಣ, ತಾಯಪ್ಪ ಜೇಗರಕಲ್ ನಾಗಪ್ಪ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...