ರಾಯಚೂರು | ಉಸಿರುಗಟ್ಟಿ 20ಕ್ಕೂ ಹೆಚ್ಚು ಕುರಿಗಳು ಸಾವು

Date:

ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಬಳಿ ಸುಮಾರು 20ಕ್ಕೂ ಹೆಚ್ಚು ಕುರಿಗಳು ಉಸಿರುಗಟ್ಟಿಕೊಂಡು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಈ ಕುರಿಗಳು ಗ್ರಾಮದ ಭೀಮಣ್ಣ ಹಾಗೂ ವೀರೇಶ ಅವರಿಗೆ ಸೇರಿದ್ದವು ಎಂದು ತಿಳಿದು ಬಂದಿದೆ.

ಮಾಹಿತಿಯ ಪ್ರಕಾರ, ಕುರಿ ಹಿಂಡನ್ನು ಎಂದಿನಂತೆ ಮೇಯಿಸಲು ಹೊರತಂದಾಗ ರಸ್ತೆ ಮೇಲೆ ವಾಹನ ಸಂಚಾರ ಹೆಚ್ಚಿದ್ದರಿಂದ ದಟ್ಟಣೆ ಉಂಟಾಯಿತು. ವಾಹನಗಳ ಹಾರನ್ ಶಬ್ದಕ್ಕೆ ಬೆದರಿದ ಕುರಿಗಳು ಆತಂಕಗೊಂಡು ಓಡಿಹೋಗಿದ್ದು, ಈ ನಡುವೆ ಪರಸ್ಪರ ಒಂದರ ಮೇಲೊಂದು ಬಿದ್ದು ಗುಂಪಾಗಿ ಸಿಲುಕಿಕೊಂಡಿವೆ. ಉಸಿರಾಟಕ್ಕೆ ತೊಂದರೆ ಉಂಟಾಗಿ ಹೆಚ್ಚಿನ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.

ಲಕ್ಷಾಂತರ ರೂಪಾಯಿ ಮೌಲ್ಯದ ಕುರಿಗಳನ್ನು ಕಳೆದುಕೊಂಡ ಮಾಲೀಕರು ಆಕ್ರಂದನದಲ್ಲಿ ಮುಳುಗಿದ್ದು, ಆರ್ಥಿಕವಾಗಿ ದೊಡ್ಡ ಆಘಾತ ಅನುಭವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಕುರಿತು ಮಾಹಿತಿಯನ್ನು ಪಡೆದ ಇಡಪನೂರು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಪಶುವೈದ್ಯರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಕುರಿಗಳ ಸಾವಿನ ಬಗ್ಗೆ ವರದಿ ಪಡೆದ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಇಡಪನೂರು ಪೊಲೀಸ್ ಠಾಣೆಯ ಪಿಎಸ್‌ಐ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನೆ ಕಳ್ಳತನ ಆರೋಪಿ ಬಂಧನ; 36.22 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...