ರಾಯಚೂರು | ಸಿಜೆಐ ಮೇಲೆ ಶೂ ಎಸೆತ ; ಆರೋಪಿ ವಕೀಲನ ಗಡಿಪಾರಿಗೆ ಮಾದಿಗ ಹೋರಾಟ ಸಮಿತಿ ಆಗ್ರಹ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವ ರಾಕೇಶ ಕಿಶೋರ್‌ ಎಂಬ ವಕೀಲನನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ದೇವದುರ್ಗ ಘಟಕ ವತಿಯಿಂದ ತಹಶೀಲ್ದಾರ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ನ್ಯಾಯಮೂರ್ತಿ ಗವಾಯಿ ದಲಿತ ಸಮುದಾಯದವರು ಎಂಬ ಕಾರಣಕ್ಕೆ ಮನುವಾದಿಗಳಿಗೆ ಅದು ನುಂಗಲಾರದ ಸಂಗತಿಯಾಗಿದೆ. ಸಾಮಾನ್ಯವಾಗಿ ಎಲ್ಲರೂ ನ್ಯಾಯಾಲಯದ ಒಳಗೆ ಹೋಗುವಾಗ ಗೌರವ ಸೂಚಕವಾಗಿ ಕೈಮುಗಿದು ಹೋಗುತ್ತಾರೆ. ಆದರೆ ಅಂತಹ ಪವಿತ್ರ ಸ್ಥಳಕ್ಕೆ ಅವಮಾನ ಮಾಡಿದ ಕಿಶೋರ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳದೆ ಇರುವುದು ಅನುಮಾನಾಸ್ಪದವಾಗಿದೆ ಎಂದು ಸಂಘಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಿಜೆಐ ಗವಾಯಿ ಅವರ ಮೇಲೆ ರಾಕೇಶ ಕಿಶೋರ್‌ ಎಂಬ ನಾಲಾಯಕ ವಕೀಲ್ ಶೂ ಎಸೆಯುವುದು ಅತ್ಯಂತ ಹೇಯ ಮತ್ತು ರಾಷ್ಟ್ರವಿರೋಧಿ ಕೃತ್ಯವಾಗಿದೆ. ಇದರಿಂದ ಸಿಜೆಐ ಅವರಿಗೆ ಅಷ್ಟೇ ಅಲ್ಲದೆ ಇಡೀ ದೇಶದ ನಾಗರಿಕರಿಗೆ ಆಗಿರುವ ಅಪಮಾನ. ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ರಾಷ್ಟ್ರವಿರೋಧ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಅಂಬೇಡ್ಕರ ರವರು ಬರೆದ ಸಂವಿಧಾನದಲ್ಲಿ ಪ್ರಧಾನ ಮಂತ್ರಿಯಾಗಿದ್ದು ಮರೆತಿದ್ದಾರೆನೋ ಅಂತಹ ಆನಿಸುತ್ತಿದೆ. ಯಾಕೆಂದರೆ ಇಂತಹ ಘಟನೆ ನಡೆದಾಗ ಸಂಬಂಧಪಟ್ಟಂತಹ ಮೋದಿಜಿಯವರು ಕೇಂದ್ರದ ಗೃಹ ಮಂತ್ರಿಯಾದ ಅಮಿತ್ ಶಾ ಅವರು ನಿರ್ಧಾಕ್ಷಿಣ್ಯ ಆತನ ಮೇಲೆ ಕ್ರಮ ವಹಿಸಿ ದೇಶದಿಂದ ಗಡಿ ಪಾರು ಮಾಡಬೇಕಾಗಿತ್ತು. ಆದರೆ ಶೂ ಎಸೆದಿರುವ ವಕೀಲ ಆರ್‌ ಎಸ್ ಎಸ್‌ ಸನಾತವಾಗಿರುವುದರಿಂದ ಯಾವುದೇ ಕ್ರಮ ಜರುಗಿಸದೇ ಬೇಜವಬ್ದಾರಿತನ ಸಹಿಸುವುದಿಲ್ಲ. ಕೂಡಲೇ ದೇಶದಿಂದ ಗಡಿಪಾರು ಮಾಡಬೇಕು ಇಲ್ಲದಿದ್ದರೆ ಬೃಹತ್‌ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | RSS ಪಥಸಂಚಲನದಲ್ಲಿ ಪಿಡಿಒ ಭಾಗಿ; ಕ್ರಮಕ್ಕೆ ಒತ್ತಾಯ

ಈ ವೇಳೆ ಜಿಲ್ಲಾಧ್ಯಕ್ಷ ಹನುಮಂತ ಮನ್ನಾಪುರಿ, ನಿಂಗಪ್ಪ ಗೌಡುರು, ಭೀಮರಾಯ ಭಂಡಾರಿ,ಮೌನೇಶ ಜಾಲಹಳ್ಳಿ, ಅಬ್ರಾಹಂ ಕಮಲದಿನ್ನಿ, ಬಸವರಾಜ ಜಯಂ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...