ರಾಯಚೂರು | ‌ನಾಲ್ಕು ವಿದ್ಯುತ್‌ ಘಟಕಗಳ ಸ್ಥಗಿತ; ಉತ್ಪಾದನೆಯಲ್ಲಿ ಇಳಿಕೆ

Date:

ಬೇಡಿಕೆ ಇಲ್ಲದ ಕಾರಣ ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ನಾಲ್ಕು ವಿದ್ಯುತ್ ಘಟಕಗಳು ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದು, ಒಟ್ಟು ಉತ್ಪಾದನೆಯಲ್ಲಿ ಗಣನೀಯ ಇಳಿಕೆಯಾಗಿದೆ. 1720 ಮೆ.ವ್ಯಾ ವಿದ್ಯುತ್ ಉತ್ಪಾದನೆಯ ಪೈಕಿ 430 ಮೆ ವ್ಯಾ ವಿದ್ಯುತ್ ಮಾತ್ರ ಉತ್ಪಾದನೆಯಾಗುತ್ತಿದೆ ಎಂದು ತಿಳಿದುಬಂದಿದೆ.

ಶಾಖೋತ್ಪನ್ನ ಕೇಂದ್ರದಲ್ಲಿ 210 ಮೆ ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಒಂದು, ಎರಡು, ಮೂರು ಮತ್ತು ಆರನೇ ಘಟಕಗಳು ನಿಲುಗಡೆಯಾಗಿವೆ. 250 ಮೆ ವ್ಯಾ ವಿದ್ಯುತ್ ಉತ್ಪಾದಿಸುವ 8ನೇ ಘಟಕ ಸೇರಿದಂತೆ ಮೂರು ಘಟಕಗಳಿಂದ ಉತ್ಪಾದನೆ ಮಾಡಲಾಗುತ್ತಿದೆ. ಐದು ಮತ್ತು ಏಳನೇ ಘಟಕದಲ್ಲಿಯೂ ಪೂರ್ಣ ಪ್ರಮಾಣದ ವಿದ್ಯುತ್ ಉತ್ಪಾದನೆಯಾಗುತ್ತಿಲ್ಲ ಎನ್ನಲಾಗಿದೆ.

ಬಳ್ಳಾರಿ ಶಾಖೋತ್ಪನ್ನ ಕೇಂದ್ರದ ಮೂರು ಘಟಕ ಹಾಗೂ ವೈಟಿಪಿಎಸ್‌ನ ಎರಡು ಘಟಕಗಳಲ್ಲಿ ಪೂರ್ಣ ಪ್ರಮಾಣದ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಉಳಿದಂತೆ ಜಲ ವಿದ್ಯುತ್ ಘಟಕಗಳು ಬಹುತೇಕ ಸ್ಥಗಿತಗೊಂಡಿದ್ದರಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಗಣನೀಯ ಇಳಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

11 ಸಾವಿರ ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ 2,600 ಮೆ.ವ್ಯಾ ಮಾತ್ರ ವಿದ್ಯುತ್ ಉತ್ಪಾದನೆಯಾಗುತ್ತಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ವಿದ್ಯುತ್ ಬೇಡಿಕೆಯಲ್ಲಿ ಇಳಿಕೆ ಕಂಡಿದೆ. ಆರ್‌ಟಿಪಿಎಸ್‌ನ 8 ಘಟಕಗಳಿಗೆ ಅಗತ್ಯವಿರುವ ಕಲ್ಲಿದ್ದಲು ಶೇ.20 ಸಂಗ್ರಹವಿದೆ. ಬೇಡಿಕೆಯಂತೆ ಪೂರೈಕೆಗೆ ಎಂಸಿಎಲ್ ಸಿದ್ದವಿದೆ. ರಾಯಚೂರು, ಯರಮರಸ್ ಹಾಗೂ ಬಳ್ಳಾರಿ ಘಟಕಗಳಲ್ಲಿ 58 ದಿನಗಳಿಗೆ ಆಗುವಷ್ಟು ಕಲ್ಲಿದ್ದಲು ದಾಸ್ತಾನು ಸಂಗ್ರಹವಿದೆ ಎನ್ನಲಾಗಿದೆ.

ಶಾಖೋತ್ಪನ್ನ ಘಟಕದ ಯಂತ್ರ ಚಾಲಕ ರಂಗ ರೆಡ್ಡಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “‌ವಿದ್ಯುತ್‌ ಘಟಕಗಳು ವರ್ಷಕ್ಕೊಮ್ಮೆ ಸ್ಥಗಿತಗೊಳ್ಳುತ್ತವೆ. ಅಂತೆಯೇ ಈ ಬಾರಿ 2ನೇ ಘಟಕ ಸ್ಥಗಿತಗೊಂಡಿದೆ. ಇನ್ನೊಂದು ತಿಂಗಳು ಕಾಲ ಅದರಲ್ಲಿ ಕಾರ್ಯ ನಿರ್ವಹಿಸಲು ಆಗುವುದಿಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಲುಷಿತ ನೀರು ಸೇವನೆಯಿಂದ 16 ಮಂದಿ ಅಸ್ವಸ್ಥ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

“ವಿದ್ಯುತ್‌ ಉತ್ಪಾದಿಸುವ 1ನೇ ಘಟಕದ ಕಟ್ಟಡ ಕಳೆದ ವರ್ಷ ಬಿದ್ದಿದ್ದು, ಅದರಲ್ಲಿ ಸಂಪೂರ್ಣವಾಗಿ ಕೆಲಸ ಸ್ಥಗಿತಗೊಂಡಿದೆ. ಅದರ ದುರಸ್ತಿ ಕಾರ್ಯ ನಡೆಸಲು ಮೂರು ವರ್ಷಗಳು ಬೇಕಾಗಬಹುದು. ಈ ಬಾರಿ ಯಾವುದೇ ಕೊರತೆಯಿಂದ ವಿದ್ಯುತ್‌ ಘಟಕ ಸ್ಥಗಿತಗೊಂಡಿಲ್ಲ” ಎಂದರು.

“ವಿದ್ಯುತ್‌ ಘಟಕಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ವೇತನ ಕಡಿತಗೊಳಿಸುವುದಾಗಿ ಹೇಳುತ್ತಿದ್ದಾರೆ. ನಾವು ಗುತ್ತಿಗೆ ಕಾರ್ಮಿಕರಾಗಿರುವುದರಿಂದ ಯಾವುದೇ ಭದ್ರತೆ ಇಲ್ಲ. ಈ ಹಿನ್ನೆಲೆಯಲ್ಲಿ ಖಾಯಂ ನೇಮಕಾತಿಗೆ ಒತ್ತಾಯಿಸಿದ್ದೇವೆ” ಎಂದು ಅವಲತ್ತುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...