ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಅವರು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸ್ವಾಮೀಜಿಗಳಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪೀಠದ ಭಕ್ತರು ತಿಳಿಸಿದ್ದಾರೆ.
ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ತಿಂಥಣಿಯ ಕನಕ ಗುರುಪೀಠದಲ್ಲಿಯೇ ನಡೆಸಲಾಗುವುದು. ಹಾಲುಮತದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಭಕ್ತರು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗುತ್ತಿಗೆ ಕಂಪನಿಗೆ ಬಿಲ್ ಬಾಕಿ; ಸಮಾಜ ಕಲ್ಯಾಣ ಇಲಾಖೆಯ ಪೀಠೋಪಕರಣಗಳ ಜಪ್ತಿ
ಸ್ವಾಮೀಜಿಗಳ ನಿಧನಕ್ಕೆ ಭಕ್ತರು, ಶಿಷ್ಯವರ್ಗ ಹಾಗೂ ವಿವಿಧ ಮಠಾಧೀಶರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನವರಿ 12,13,14 ಹಾಲುಮತ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು ಎನ್ನಲಾಗಿದೆ.





