ರಾಯಚೂರು | ಸಾಮಾಜಿಕ ನ್ಯಾಯಕ್ಕಾಗಿ ಸದಾಶಿವ ಆಯೋಗ ಜಾರಿಗೆ ಆಗ್ರಹ; ಅ.31ರಂದು ಧರಣಿ 

Date:

ಪರಿಶಿಷ್ಟ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ರವಾನಿಸುವುದು ಸೇರಿದಂತೆ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ವು ಅಕ್ಟೋಬರ್‌ 31ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲು ನಿರ್ಧರಿಸಿದೆ ಎಂದು ರಾಯಚೂರು ಜಿಲ್ಲಾ ಸಂಚಾಲಕ ಕೆ ಪಿ ಅನಿಲ್‌ಕುಮಾರ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಎಲ್ಲ ಸರ್ಕಾರಗಳು ಮೀಸಲಾತಿ ವರ್ಗೀಕರಣದ ಕುರಿತು ತಾರ್ಕಿಕ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿವೆ. ಈ ಹಿಂದೆ ಬಿಜೆಪಿ ಸರ್ಕಾರ ಮಾಧುಸ್ವಾಮಿ ನೇತೃತ್ವದ ಉಪಸಮಿತಿ ವರದಿಯನ್ನು ಕೇಂದ್ರಕ್ಕೆ ರವಾನಿಸಿ ಸುಮ್ಮನಾಯಿತು. ಕೇಂದ್ರ ಸರ್ಕಾರ ಸಂವಿಧಾನಾತ್ಮಕವಾಗಿ ಕಾನೂನು ತಿದ್ದುಪಡಿ ಮಾಡದೆ ನಿರ್ಲಕ್ಷಿಸುತ್ತಾ ಬಂದಿದೆ. ಶೆಡ್ಯೂಲ್ 9ಕ್ಕೆ ಸೇರಿಸುವ ಭರವಸೆಯೂ ಈಡೇರಿಲ್ಲ. 341(2) ತಿದ್ದಪಡಿ ತಂದು ಜಾರಿಗೊಳಿಸಲು ಮುಂದಾಗಲಿಲ್ಲ” ಎಂದು ಆರೋಪಿಸಿದರು.

“ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವಂತೆ ಒಳಮೀಸಲಾತಿ ಜಾರಿಗೊಳಿಸಬೇಕು. ಮುಂದಿನ ಅಧೀವೇಶನದಲ್ಲಿ ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಮತ್ತೊಮ್ಮೆ ಶಿಫಾರಸು ಮಾಡುವಂತೆ ಆಗ್ರಹಿಸಲು ಜಿಲ್ಲೆಯಿಂದ 500 ಮಂದಿ ಬೆಂಗಳೂರಿಗೆ ತೆರಳುತ್ತಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಜನರಲ್ಲಿ ಪರಸ್ಪರ ಸೇವಾ ಮನೋಭಾವ ಬೆಳೆಯಲಿ: ಸಲೀಮ್ ಅರ್ಶಾದಿ

ಈ ಸಂದರ್ಭದಲ್ಲಿ ಅಬ್ರಾಹಂ ಹೊನ್ನಟಗಿ, ಜನಾರ್ಧನ ಹಳ್ಳಿ ಬೆಂಚಿ, ರಮೇಶ, ನರಸಿಂಹಲು, ಜಯಪ್ಪ, ಶರಣಬಸವ, ಸುರೇಶ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...