ರಾಯಚೂರು | ರಾಜ್ಯ ಹಾಗೂ ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರುದ್ಧ ಮೇ.14 ಬೆಂಗಳೂರಿನಲ್ಲಿ ಬೃಹತ್ ಹೋರಾಟ : ಎಂ.ಶಶಿಧರ್

Date:

ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಬೆಲೆ ಏರಿಕೆಯನ್ನು ಮಾಡುವ ಮೂಲಕ ಜನರನ್ನು ದೋಚುತ್ತಾ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಾ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ.ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನ ವಿರೋಧಿ ನೀತಿಗಳನ್ನು ಖಂಡಿಸಿ ಬೃಹತ್ ಜನ ಹೋರಾಟ ಎಸ್.ಯು.ಸಿ.ಐ ಪಕ್ಷದಿಂದ ಮೇ 14 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಯು.ಸಿ.ಐ ಪಕ್ಷದ ರಾಜ್ಯ ಸೆಕ್ರೇಟೇರಿಯಟ್ ಸದಸ್ಯರಾದ ಎಂ.ಶಶಿಧರ್ ಹೇಳಿದರು

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚು ಮಾಡುತ್ತಿದ್ದು, ಅಲ್ಲದೇ  ಎಲ್ಲಾ ವಸ್ತುಗಳ‌ ಮೇಲೆ ಅಧಿಕ ತೆರಿಗೆಯನ್ನು ವಿಧಿಸುತ್ತಿದ್ದು, ನಮ್ಮ ಮಕ್ಕಳಿಗೆ ಶಿಕ್ಷಣದ ವೆಚ್ಚ, ಆರೋಗ್ಯದ ವೆಚ್ಚವನ್ನು ನಾವೇ ಭರಿಸಬೇಕಾದ ದುರ್ಗತಿ ಬಂದಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರ ತಾನು ಮೇಲು ನೀನು ಮೇಲೆಂದು ಮನಬಂದಂತೆ ನಡೆಸುತ್ತಿದೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅನುಮಾನಾಸ್ಪದ ವ್ಯಕ್ತಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರ ತೆರಿಗೆಯ ಹಣ ಅಭಿವೃದ್ಧಿ ಹೆಸರಿನಲ್ಲಿ ಕಾರ್ಪೋರೇಟ್ ಕಂಪನಿಗಳು, ದೊಡ್ಡ ಗುತ್ತಿಗೆದಾರರು ,ಕೆಂಪು ಗೂಟದ ರಾಜಕಾರಣಿಗಳು ಹಿರಿಯ ಅಧಿಕಾರಿಗಳ ಜೇಬು ಸೇರುತ್ತಿವೆ.ಇದಲ್ಲದೇ ಯುವನತೆಗೆ ಉದ್ಯೋಗ ಇಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು , ಯುವಜನರು ಡ್ರಗ್ಸ್,ಮದ್ಯ ಮುಂತಾದ ವ್ಯಸನಗಳಲ್ಲಿ ತೊಡುಗುತ್ತಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಅಚ್ಚೇ ದಿನ್ , ಗ್ಯಾರಂಟಿಗಳು ರೈತರ ಹಾಗೂ ಕಾರ್ಮಿಕರ ಬದುಕನ್ನು ಹಸನು ಮಾಡಿಲ್ಲ ಈಗಾಗಿ ನೈಜ ಸಮಸ್ಯೆಗಳನ್ನು ಮುನ್ನೆಲೆಗೆ ತರುವ ಹಿನ್ನೆಲೆ ಎಸ್ ಯು ಸಿ ಐ ರಾಜ್ಯ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದು , ರೈತರು,ಕಾರ್ಮಿಕರು, ಯುವಜನರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಚನ್ನಬಸವ ಜಾನೇಕಲ್ , ಮಹೇಶ್ ಚೀಕಲಪರ್ವಿ , ವೀರೇಶ್ ಎನ್.ಎಸ್ , ಮಲ್ಲನಗೌಡ , ಅಣ್ಣಪ್ಪ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...