ರಾಯಚೂರು |‌ ಡಿ.04 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ

Date:

ರಾಜ್ಯ ಸರ್ಕಾರಿ ನೌಕರರ ಸಂಘದ ರಾಯಚೂರು ಜಿಲ್ಲಾ ಶಾಖೆ ಚುನಾವಣೆ ಡಿಸೆಂಬರ್ 04ರಂದು ನಡೆಯಲಿದ್ದು, ಸರ್ಕಾರಿ ನೌಕರರು ಮತ ಚಲಾಯಿಸಬೇಕು ಎಂದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಅಭ್ಯರ್ಥಿ ಆಂಜನೇಯ ಕೆ‌ ಹೇಳಿದರು.

ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “2024-26ನೇ ಸಾಲಿನ ಅವಧಿಗೆ ಜಿಲ್ಲಾ ಶಾಖೆಯ ಮೊದಲ ಹಂತದಲ್ಲಿ ಪದಾಧಿಕಾರಿಗಳ ಚುನಾವಣೆ ನಡೆದಿದ್ದು, ಇದೀಗ ಜಿಲ್ಲಾದ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್ ಸ್ಥಾನಕ್ಕೆ ಚುನಾವಣೆ ಡಿಸೆಂಬರ್‌ 4ರಂದು ನಡೆಯಲಿದೆ” ಎಂದರು.

“ಅಧ್ಯಕ್ಷ ಸ್ಥಾನಕ್ಕೆ ಆಂಜನೇಯ ಕೆ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ವೆಂಕಟೇಶ ಡಿ ಹಾಗೂ ಖಜಾಂಚಿ ಸ್ಥಾನಕ್ಕೆ ರಾಜಶೇಖರ ಅವರು ಸ್ಪರ್ಧಿಸಿದ್ದಾರೆ. ಸಮಾನ ಮನಸ್ಕ ನೌಕರರ ಹಿತ ಪಡೆಯಿಂದ ಸ್ಪರ್ಧಿಸಿದವರಿಗೆ ತಮ್ಮ ಮತ ಚಲಾಯಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ದೊರೆಯುವ ಸೌಲಭ್ಯಗಳನ್ನು ಸೇರಿದಂತೆ ಅನೇಕ ಬೇಡಿಕೆಗಳು ಕುರಿತು ಪ್ರಣಾಳಿಕೆಯಲ್ಲಿವೆ. ಭ್ರಷ್ಟಾಚಾರ ರಹಿತ, ನಿಸ್ವಾರ್ಥ ಆಡಳಿತ ನೀಡುವ ರಾಜ್ಯದಲ್ಲಿ ಏಕೈಕ ಸಂಘವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಮರ್ಪಕ ಬಸ್‌ ವ್ಯವಸ್ಥೆಯಿಲ್ಲದೆ ಶಾಲಾ ಮಕ್ಕಳ ಪರದಾಟ; ರಸ್ತೆ ತಡೆದು ಪ್ರತಿಭಟನೆ

“ಎನ್‌ಪಿಎಸ್ ಕೈಬಿಡಲು ಹೋರಾಟ ತೀವ್ರಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ, ಒಪಿಎಸ್ ಜಾರಿಗೊಳಿಸಲು ಹೋರಾಟ ನಡೆಸುವುದು, ನೌಕರರಿಗೆ ಅನುಗುಣವಾಗುವ ನೌಕರರ ಭವನ ನಿರ್ಮಾಣ, ವಾಣಿಜ್ಯ ಮಳಿಗೆ, ವಸತಿ ಗೃಹ ನಿರ್ಮಾಣಕ್ಕೆ ಒತ್ತು ನೀಡುವುದಾಗಿದೆ” ಎಂದರು.

ಈ ಸಂದರ್ಭದಲ್ಲಿ ವೆಂಕಟೇಶ ಡಿ, ರಾಜಶೇಖರ, ವೀರಭದ್ರಪ್ಪ, ರಾಘವೇಂದ್ರ, ಚಾಮರಾಜ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...