ರಾಯಚೂರು | ಸೀಟ್ ಸಿಗದಕ್ಕೆ ಬಸ್ ಮೇಲೆ ಕಲ್ಲು ತೂರಾಟ; ತಪ್ಪೊಪ್ಪಿಕೊಂಡ ಬಂಧಿತ ಆರೋಪಿ

Date:

ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ವ್ಯಾಪ್ತಿಯ ಗೋಲಪಲ್ಲಿ ಬಳಿ ನ.18 ರಂದು ಮಧ್ಯರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲು ತೂರಾಟದಿಂದ ಸಾರಿಗೆ ಸಂಸ್ಧೆಯ 3 ಬಸ್‌ಗಳ ಗಾಜು ಒಡೆದು ಹೋಗಿದ್ದವು. ಈ ಕುರಿತು ಚಿತ್ತಾಪೂರ ಘಟಕದ ಬಸ್ ಚಾಲಕ ಭದ್ರಪ್ಪ ಎಂಬುವರು ಸಾರಿಗೆ ಸಂಸ್ಥೆಯ ಮೂರು ಬಸ್‌ಗಳ 79 ಸಾವಿರ ಮೌಲ್ಯದ ಕಿಟಕಿ, ಬಸ್ಸಿನ ಮುಂಭಾಗದ ಗಾಜು ಒಡೆದು ಹಾನಿಯಾಗಿದೆ ಕುರಿತು ಹಟ್ಟಿ ಠಾಣೆಯಲ್ಲಿ ದೂರು‌ ನೀಡಿದ್ದರು.ದೂರಿನ ಅನ್ವಯ ಪೊಲೀಸರು ದಮತೋರು ದೊಡ್ಡಿಯ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆತನನ್ನು ಪೊಲೀಸರು ತನಿಖೆ ಮಾಡಿದಾಗ, ʼಅಕ್ಕ ಮಾವನನ್ನು ತಮ್ಮ ಸಂಬಂಧಿಕರೊಂದಿಗೆ ಬೆಂಗಳೂರಿಗೆ ಕಳುಹಿಸಲು ಗುರುಗುಂಟ ಗ್ರಾಮಕ್ಕೆ ಬಂದಿದ್ದೆ, ಬಸ್ಸುಗಳು ನಿಲ್ಲಿಸದೆ ಇರುವುದಕ್ಕೆ ಹಾಗೂ ಕೂರಲು ಆಸನ ಸಿಗದೇ ಇರುವುದಕ್ಕೆ ಅಸಮಧಾನಗೊಂಡು ವಾಪಸ್ ಮನೆಗೆ‌ ಕರೆದುಕೊಂಡು ಹೋಗಬೇಕಾಯಿತು. ನಂತರ 4 ಜನ ಸ್ನೇಹಿತರು ಗೋಲಪಲ್ಲಿ ಗುಡ್ಡದಲ್ಲಿ ರಾತ್ರಿ ಪಾರ್ಟಿ ಮಾಡಿ ಕುಡಿದ ಅಮಲಿನಲ್ಲಿ ಮಂಗಳವಾರ ರಾತ್ರಿ 1.30 ಗಂಟೆ ಸುಮಾರಿಗೆ ಬಸ್ ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ನಡೆಸಿ ಪರಾರಿಯಾಗಿದ್ದೇವೆʼ ಎಂದು ಆರೋಪಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಇನ್ನುಳಿದ 4 ಜನ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...