ರಾಯಚೂರು | ಬೀದಿನಾಯಿ ದಾಳಿ; ಯುವತಿ ಸಾವು ಬದುಕಿನೊಂದಿಗೆ ಹೋರಾಟ

Date:

ರಾಯಚೂರು ನಗರದ ಮಡ್ಡಿಪೇಟೆ ಬಡಾವಣೆಯಲ್ಲಿ ಬೀದಿನಾಯಿ ದಾಳಿಗೆ ಒಳಗಾಗಿ ಗಾಯಗೊಂಡಿದ್ದ ಯುವತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಪೋಷಕರು ಆತಂಕದಲ್ಲಿದ್ದಾರೆ.

ನಗರದ ವಾರ್ಡ್ ನಂ.23ರ ಮಡ್ಡಿಪೇಟೆ ಬಡಾವಣೆಯ ಲಕ್ಷ್ಮಣ ಸ್ವಾಮಿ ಮಠದ ಹಿಂದೆ ಬೀದಿನಾಯಿ ಯುವಮತಿಯ ಮೇಲೆ ದಾಳಿ ಮಾಡಿದಾಗ ಕೆಳಗ್ಗೆ ಬಿದ್ದ ಯುವತಿ ಗಂಭೀರ ಗಾಯಗೊಂಡಿದ್ದು, ಇದೀಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ಡಿಸೆಂಬರ್‌ 7ರ ಬೆಳಿಗ್ಗೆ ಮನೆಯ ಮುಂದೆ ಯುವತಿ ನಿಂತಿದ್ದಾಗ ಬೀದಿ ನಾಯಿಗಳ ದಂಡು ಯುವತಿಯ ಮೇಲೆ ದಾಳಿ ಮಾಡಿದೆ. ಯುವತಿ ಕೂಡಲೇ ಕೆಳಗೆ ಬಿದ್ದ ಕಾರಣ ತಲೆಗೆ ಗಂಭೀರ ಪೆಟ್ಟು ಬಿದ್ದಿದೆ. ನಂತರ ತಂದೆ ತಾಯಿ ಯುವತಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಜೆಯಾದರೂ ಯುವತಿಗೆ ಎಚ್ಚರವಾಗದ ಕಾರಣ ಅಂದು ಸಂಜೆ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಿಮ್ಸ್ ಆಸ್ಪತ್ರೆ ವೈದ್ಯರು ಯುವತಿಗೆ ಚಿಕಿತ್ಸೆ ನೀಡಿದ್ದು, ತಲೆಗೆ ಪೆಟ್ಟು ಬಿದ್ದಿರುವ ಕಾರಣ ರಕ್ತ ಹೆಪ್ಪುಗಟ್ಟಿದೆ. ಹಾಗಾಗಿ ಯುವತಿ ಕೋಮಾಗೆ ಹೋಗಿದ್ದಾರೆಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ವರ್ಗಾವಣೆ ಮಾಡಿದ್ದಾರೆ. ಯುವತಿಯನ್ನು ಬಳ್ಳಾರಿ ಆಸ್ಪತ್ರೆಯಲ್ಲಿ ಒಂದು ದಿನ ಚಿಕಿತ್ಸೆ ನೀಡಿ ಸುಧಾರಿಸದ ಕಾರಣಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗಲು ತಿಳಿಸಿದ್ದಾರೆ. ಬೆಂಗಳೂರುನಲ್ಲಿ ಚಿಕಿತ್ಸೆ ಕೊಡಿಸಲು ಆರ್ಥಿಕ ವ್ಯವಸ್ಥೆ ಇಲ್ಲದ ಕಾರಣ ಪುನಃ ರಾಯಚೂರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದೇವೆ” ಎಂದು ಯುವತಿಯ ಪಾಲಕರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಅಲೆಮಾರಿಗಳಿಗೆ ಸೂರು ಕಲ್ಪಿಸಲು ಆಗ್ರಹ

“ಯುವತಿ ಬದುಕುವುದು ಕಷ್ಟ. ಏನಾದರೂ ಹೆಚ್ಚು ಕಡಿಮೆಯಾದರೆ ನಮ್ಮ ಮೇಲೆ ಆರೋಪ ಮಾಡಬೇಡಿ, ಅವಳ ಸಾವಿಗೆ ನಾವು ಕಾರಣರಲ್ಲವೆಂದು ಆಸ್ಪತ್ರೆ ವೈದ್ಯರು ಪತ್ರ ಬರೆಸಿಕೊಂಡು ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿದ್ದಾರೆ” ಎಂದು ನೋವು ತೋಡಿಕೊಂಡರು.

“ನಗರದ ಕೆಲವು ದಿನ ಹಿಂದೆಯೂ ಮೂವರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ್ದವು. ಬೀದಿನಾಯಿಗಳ ಹಾವಳಿ ಮೀತಿ ಮೀರಿದ್ದು, ನಿಯಂತ್ರಿಸಬೇಕಾದ ನಗರಸಭೆ ಕಣ್ಣುಮುಚ್ಚಿ ಕುಳಿತಿದೆ” ಎಂದು ಸಾರ್ವಜನಿಕರು ಆರೋಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...