ರಾಯಚೂರು | ವಿದ್ಯಾರ್ಥಿನಿ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಐಒ ಆಗ್ರಹ

Date:

ಸಿಂಧನೂರು ನಗರದಲ್ಲಿ ಎಂಎಸ್‌ಸಿ ವಿದ್ಯಾರ್ಥಿನಿ ಶಿಫಾಳನ್ನು ಹತ್ಯೆಗೈದ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ರಾಯಚೂರಿನ ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗನೈಜೇಶನ್‌ ಆಫ್‌ ಇಂಡಿಯಾ (ಎಸ್‌ಐಒ) ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿತು.

ಯುವತಿಯರು ಶಿಕ್ಷಣದ ಕಡೆಗೆ ಹೆಚ್ಚು ಆಸಕ್ತಿ ವಹಿಸುತ್ತಿರುವ ಸಂದರ್ಭದಲ್ಲಿ ಇಂತಹ ಅಮಾನವೀಯ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗಾತಿಯಾಗಿದೆ. ಕೂಡಲೇ ಇಂತಹ ಘಟನೆಗಳು ಮರು ಕಳಿಸದಂತೆ ಕಠಿಣ ಕ್ರಮ ವಹಿಸಬೇಕು. ಫಾಸ್ಟ್ರಾಕ್ ಕೋರ್ಟ್ ಮೂಲಕ ವಿಚಾರಣೆ ನಡೆಸಿ ಆರೋಪಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿತು.

“ರಾಜ್ಯದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ದಿನದಿಂದ ದಿನಕ್ಕೆ ಲೈಂಗಿಕ ದೌರ್ಜನ್ಯಗಳು, ಅತ್ಯಾಚಾರಗಳು ಮತ್ತು ಪ್ರೀತಿಯ ನೆಪದಲ್ಲಿ ಕೊಲೆಗಳು ನಡೆಯುತ್ತಿರುವುದು ಭಯದ ವಾತಾವರಣ ಸೃಷ್ಟಿ ಮಾಡಿದೆ. ವಿದ್ಯಾರ್ಥಿನಿಯರು ಕಾಲೇಜು ಮೆಟ್ಟಿಲು ಹತ್ತಲು ಹತ್ತಾರು ಸವಾಲು ಎದುರಿಸುತ್ತಿರುವ ಸಂದರ್ಭದಲ್ಲಿ ಇಂತಹ ಘಟನೆಗಳು ಪೋಷಕರ ಮಾನಸಿಕ ಧೈರ್ಯವನ್ನು ಕುಸಿಯುವಂತೆ ಮಾಡುತ್ತವೆ. ಸಂಬಂಧಪಟ್ಟ ಇಲಾಖೆ ಕೂಡಲೇ ಇಂತಹ ಕುಕೃತ್ಯಗಳು ನಡೆಯದಂತೆ ಕ್ರಮವಹಿಸಬೇಕು” ಎಂದು ಸಂಘಟನೆಯ ಮುಖಂಡರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಿಂಗಸುಗೂರು ಪಟ್ಟಣದ ಹೊರವಲಯದಲ್ಲಿ ಹಲವು ಶಾಲಾ-ಕಾಲೇಜುಗಳಿದ್ದು, ವಿದ್ಯಾರ್ಥಿನಿಯರ ಸಂಖ್ಯೆಯೂ ಹೆಚ್ಚಿದೆ. ಶಾಲೆ, ಕಾಲೇಜು ಬಿಟ್ಟ ಬಳಿಕ ಹಲವಾರು ಹುಡುಗರು ಬೈಕ್‌ನಿಂದ ಅವರನ್ನು ಹಿಂಬಾಲಿಸುವುದು ಮತ್ತು ಅವರನ್ನು ಚುಡಾಯಿಸುವುದು ಕಂಡು ಬರುತ್ತಿದೆ. ಕ್ಯಾಂಪಸ್ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಲ್ಲದ ಪುಂಡ-ಪೋಕರಿಗಳ ಹಾವಳಿ ಹೆಚ್ಚಾಗಿದ್ದು, ಅದನ್ನು ಪೊಲೀಸ್ ಇಲಾಖೆ ವಿಶೇಷ ಗಸ್ತಿಗೆ ವ್ಯವಸ್ಥೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕುಡುಕರ ಅಡ್ಡವಾದ ಇಂದಿರಾ ಕ್ಯಾಂಟಿನ್; ದೊರೆಯುವುದೇ ಉದ್ಘಾಟನೆ ಭಾಗ್ಯ?

ಈ ವೇಳೆ ಅಮ್ಜದ್ ಅಲಿ, ಇಮ್ತಿಯಾಜ್, ರಿಯಾಝ್, ಶೇಖ್ ಅಫ್ರಿದಿ, ಅಬ್ದುಲ್ ಕರೀಂ, ಆಲಂ ಹಾಗೂ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...