ರಾಯಚೂರು | ಸರಿಯಾದ ಸಮಯಕ್ಕೆ ಬಸ್‌ ಸಂಚಾರ ಕಲ್ಪಿಸಲು; ವಿದ್ಯಾರ್ಥಿಗಳ ಒತ್ತಾಯ

Date:

ಮಾನ್ವಿ ಹಾಗೂ ಸಿರವಾರ ತಾಲ್ಲೂಕಿನ ಕರಡಿಗುಡ್ಡ ಕೆ.ಗುಡದಿನ್ನಿ, ಜಂಬಲದಿನ್ನಿ, ಚಾಗಬಾವಿ ಹಾಗೂ ಜಾಗೀರ್ ಪನ್ನೂರು ಗ್ರಾಮಗಳ ನಿವಾಸಿಗಳು ದಿನನಿತ್ಯ ಬಸ್ ಸೇವೆಯ ಅನಿಯಮಿತ ವೇಳಾಪಟ್ಟಿಯಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಕೂಡಲೇ ಸರಿಯಾದ ಸಮಯಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಬೇಕೆಂದು ಭೀಮಸೇನೆ ಕರ್ನಾಟಕ ವಿದ್ಯಾರ್ಥಿ ಘಟಕ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಾನ್ವಿ ಬಸ್‌ ಡಿಪೋ ಅಧಿಕಾರಿಗೆ ಮನವಿ ಸಲ್ಲಿಸಿದರು.

ಗ್ರಾಮಸ್ಥರ ಪ್ರಕಾರ, ಸಿರವಾರ ಮತ್ತು ಮಾನ್ವಿ ತಾಲ್ಲೂಕು ಕೇಂದ್ರಕ್ಕೆ ಬೆಳಿಗ್ಗೆ 6 ಗಂಟೆಗೆ ಕರಡಿಗುಡ್ಡ ಕೆ.ಗುಡದಿನ್ನಿ, ಜಂಬಲದಿನ್ನಿ, ಚಾಗಬಾವಿ ಹಾಗೂ ಜಾಗೀರ್ ಪನ್ನೂರು ಗ್ರಾಮದ ಮಾರ್ಗದಿಂದ ತಾಲ್ಲೂಕು ಕೇಂದ್ರಕ್ಕೆ ತೆರಳಲು ಬಸ್‌ ವ್ಯವಸ್ಥೆ ಸರಿಯಾಗಿ ಕಲ್ಪಿಸಬೇಕು. ಸಮಯಕ್ಕೆ ಬಾರದೆ ಕಾರಣ ಉದ್ಯೋಗಕ್ಕೆ ತೆರಳುವವರು, ಕಾಲೇಜು ಹಾಗೂ ಶಾಲಾ ವಿದ್ಯಾರ್ಥಿಗಳು ನಿರಂತರವಾಗಿ ವಿಳಂಬಕ್ಕೆ ಒಳಗಾಗುತ್ತಿದ್ದಾರೆ ಎಂದರು.

ಇದೇ ರೀತಿ, ಮಾನ್ವಿ ತಾಲ್ಲೂಕು ಕೇಂದ್ರದಿಂದ ಮಧ್ಯಾಹ್ನ 2 ಗಂಟೆಗೆ ಬಸ್‌ ಹೊರಡಬೇಕು. ಸರಿಯಾದ ಸಮಯಕ್ಕೆ ಹೊರಡದ ಕಾರಣಕ್ಕೆ ಹಾಗೂ ನಿಗದಿತ ವೇಳೆಗೆ ಬಸ್‌ ಸಿಗದಿರುವುದು ವಿದ್ಯಾರ್ಥಿಗಳು ಮನೆಗಳಿಗೆ ತಲುಪುವುದರಲ್ಲಿ ತೊಂದರೆ ಅನುಭವಿಸುತ್ತಿದ್ದು, ಜನಸಾಮಾನ್ಯರ ದೈನಂದಿನ ಕಾರ್ಯಗಳಿಗೂ ಅಡಚಣೆ ಉಂಟಾಗಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಸ್‌ ಸಮಯದ ಅವ್ಯವಸ್ಥೆಗೆ ತಕ್ಷಣ ಕ್ರಮಕೈಗೊಂಡು ಈ ಭಾಗದ ಬಸ್ ಗಳನ್ನು ನಿಗದಿತ ವೇಳೆಗೆ ಬಿಡುವಂತೆ ಭೀಮಸೇನೆ ಕರ್ನಾಟಕ ವಿದ್ಯಾರ್ಥಿ ಘಟಕ ವತಿಯಿಂದ ಮಾನ್ವಿ ಬಸ್‌ ಡಿಪೋ ಅಧಿಕಾರಿಗೆ ಹಕ್ಕೊತ್ತಾಯ ಸಲ್ಲಿಸಿದರು. ಹೀಗೆ ನಿರ್ಲಕ್ಷ್ಯ ವಹಿಸಿದರೆ ಮಾನ್ವಿ ತಾಲ್ಲೂಕಿನ ಶಾಲಾ – ಕಾಲೇಜು ವಿದ್ಯಾರ್ಥಿಗಳು ಸೇರಿ ಬಸ್‌ ನಿಲ್ದಾಣಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ; ಇಬ್ಬರ ಬಂಧನ

ಈ ವೇಳೆ ವಿದ್ಯಾರ್ಥಿ ಮುಖಂಡ ಪ್ರಶಾಂತ, ಶಾಂತರಾಜ್ , ಮುನಿಸ್ವಾಮಿ, ಸುನಿತಾ, ಪುಷ್ಪ, ಸಂಜಯ್, ವಿನೋದ್ ಭಾರ್ಗವ್, ಜಂಬಣ್ಣ, ಮೌನೇಶ, ಯಲ್ಲಮ್ಮ, ಸಾಯಿ ಕುಮಾರ್, ನಾಗರಾಜ್, ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...