ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಹಲವು ಗ್ರಾಮಗಳ ಶಾಲಾ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಆಗ್ರಹಿಸಿ ಮಸ್ಕಿ ಬಸ್ ಡಿಪೋಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ತಾಲೂಕಿನ ವೆಂಕಟಾಪುರ, ಹೂವಿನ ಬಾವಿ, ಮೇದಿಕಿನಾಳ, ನಾಗರಬೆಂಚಿ, ಕಾಟಗಲ ಸೇರಿದಂತೆ ವಿವಿಧ ಗ್ರಾಮದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಸ್ ಗಳು ಬಾರದಿರುವ ಕಾರಣ ಶಾಲೆಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಆಗುತ್ತಿಲ್ಲ, ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಮಸ್ಕಿಯ ಹೊಸ ಬಸ್ ನಿಲ್ದಾಣದಿಂದ ಬಸ್ ಡಿಪೋವರೆಗೆ ವಿದ್ಯಾರ್ಥಿಗಳು ಪಾದಯಾತ್ರೆ ಮಾಡುವ ಮೂಲಕ ಬಸ್ ಡಿಪೋ ಗೆ ತೆರಳಿ ಬಸ್ ಡಿಪೋ ಮುಂದೆ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ರಾಯಚೂರು | ವಿಷಪೂರಿತ ನೀರು ಸೇವನೆ; 50ಕ್ಕೂ ಹೆಚ್ಚು ಕುರಿಗಳು ಸಾವು
ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿದ ಬಸ್ ಘಟಕದ ವ್ಯವಸ್ಥಾಪಕ ಆದಪ್ಪ ಕುಂಬಾರವರು ವಿದ್ಯಾರ್ಥಿಗಳಿಗೆ ನಾಳೆಯಿಂದ ಸರಿಯಾದ ಸಮಯಕ್ಕೆ ಬಸ್ ಗಳು ತಲುಪಲು ಬಸ್ ನಿರ್ವಾಹಕರಿಗೆ ಸೂಚಿಸಲಾಗುವುದು ಎಂದು ಭರವಸೆ ನೀಡಿದರು.





