ರಾಯಚೂರು | ಕೋಮುವಾದಿ ಬಿಜೆಪಿಯನ್ನು ಸೋಲಿಸಬೇಕಿದೆ: ತುಹೀನ್ ದೆಬ್

Date:

ಶ್ರಮ, ಸಾರ್ವಭೌಮ, ಸಂಸ್ಕೃತಿ ಅಳಿಸಿ ಅದರ ಜಾಗದಲ್ಲಿ ಕಾರ್ಪೊರೇಟ್ ಪರವಾದ ಮನು ಸಂಸ್ಕೃತಿಯನ್ನು ಜಾರಿ ಮಾಡಲು ಹೊರಟ ಫ್ಯಾಸಿಸ್ಟ್ ಬಿಜೆಪಿ ಸರ್ಕಾರವನ್ನು ಸೋಲಿಸಬೇಕಿದೆ ಎಂದು ಆರ್‌ಸಿಎಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತುಹೀನ್ ದೆಬ್ ಹೇಳಿದರು.

ಅವರು ನಗರದ ಕನ್ನಡ ಭವನದಲ್ಲಿ ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ ಆರ್‌ಸಿಎಫ್ ಹಮ್ಮಿಕೊಂಡಿದ್ದ ಎರಡು ದಿನಗಳ ʼಅಖಿಲಭಾರತ ಜನ ಸಾಂಸ್ಕೃತಿಕ ಶಿಬಿರʼ ಹಾಗೂ ಇಂಡಿಯಾ ವಸರ್ಸ್ ಹಿಂದೂರಾಷ್ಟ್ರ ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ದೇಶದ ಬಹು ಸಂಸ್ಕೃತಿಯನ್ನು ನಾಶಮಾಡಿ, ಹಿಂದುತ್ವ ಆರ್‌ಎಸ್‌ಎಸ್‌, ಬಿಜೆಪಿ ಅಜಂಡದಂತೆ ಮನು ಸಂಸ್ಕೃತಿಯನ್ನು ಜನರ ಮೇಲೆ ಹೇರಲು ಹೊರಟಿರುವುದನ್ನು ಅವರು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನ, ಪ್ರಜಾತಂತ್ರ, ಜಾತ್ಯಾತೀತ, ಮೀಸಲಾತಿಯನ್ನು ಉಳಿಸಲು ಸಾಂಸ್ಕೃತಿಕವಾಗಿ ತೀವ್ರ ಸಂಘರ್ಷಕ್ಕೆ ಇಳಿಯಬೇಕಾಗಿದ್ದು, 18ನೇ ಲೋಕಸಭಾ ಚುನಾವಣೆಯಲ್ಲಿ ಅತ್ಯವಶ್ಯಕವಾದ ಪಾತ್ರವನ್ನು ಆರ್‌ಸಿಎಫ್ ವಹಿಸಲಿದೆ ಎಂದರು.

ಟಿಯುಸಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆರ್.ಮಾನಸಯ್ಯ ಅವರು ಎರಡು ದಿನಗಳ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಸೇರಿದಂತೆ ದೇಶದ 12ಕ್ಕೂ ಹೆಚ್ಚು ರಾಜ್ಯಗಳಿಂದ ಕವಿಗೋಷ್ಠಿಯಲ್ಲಿ ಭಾಗವಹಿಸಿದ ಕವಿ, ಸಾಹಿತಿ ಕಲಾವಿದರು 20ಕ್ಕೂ ಹೆಚ್ವು ಆರ್‌ಎಸ್‌ಎಸ್‌, ಬಿಜೆಪಿ ಹಿಂದುತ್ವ, ಫ್ಯಾಸಿಸಮ್ ವಿರುದ್ಧದ ಜನಪರ ಕವನಗಳನ್ನು ಅಚ್ಚುಕಟ್ಟಾಗಿ ಓದಿ ಫ್ಯಾಸಿಸ್ಟ್ ಸರ್ಕಾರ ಅಳಿಯಲಿ, ದೇಶ ಉಳಿಯಲಿ, ಸಂವಿಧಾನ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ, ಜನ ಸಂಸ್ಕೃತಿ ಚಿರಾಯುವಾಗಲಿ ಎಂಬ ಆಧಾರದಡಿಯಲ್ಲಿ ಕ್ರಾಂತಿಕಾರಿ ಕವನಗಳ ವಾಚನ ಮಾಡಿದರು.

ಬಹುಭಾಷಾ ಕವಿಗೋಷ್ಠಿ ಅಧ್ಯಕ್ಷತೆವಹಿಸಿ ಮಾತನಾಡಿದ ಜನಕವಿ, ಸಾಹಿತಿ ಸಿ.ದಾನಪ್ಪ ನಿಲೋಗಲ್ ಮಾತನಾಡಿ, ಭಾರತವನ್ನು ಹಿಂದೂರಾಷ್ಟ್ರವನ್ನಾಗಿಸಲು ಫ್ಯಾಸಿಸ್ಟ್ ದುರಾಡಳಿತದ ಕಾರ್ಪೊರೇಟ್ ಸಂಸ್ಕೃತಿಯನ್ನು ಹಿಮ್ಮೆಟ್ಟಿಸಲು ಇಂದಿನ ಗೋಷ್ಠಿಯಲ್ಲಿ ಮೊಳಗಿದ ಇಂಡಿಯಾ ಪರ ಕವನಗಳು ಹಿಂದೂರಾಷ್ಟ್ರದ ನಕಲಿ ದೇಶಪ್ರೇಮಿ ಆರೆಸ್ಸೆಸ್ ಬಿಜೆಪಿಯ ಮುಖವಾಡ ಕಳಿಚಲು, ಜನ ತಾಂತ್ರಿಕತೆಯನ್ನು ದೇಶಕ್ಕೆ ಆರ್‌ಸಿಎಫ್ ಮೂಲಕ ರವಾನಿಸುವ ಏಕೈಕ ಜನತಾ ರಾಜಕೀಯ ಜನ ಸಾಂಸ್ಕೃತಿಕ ಪ್ರಜ್ಞೆ ಸಮಕಾಲೀನವಾಗಿದೆ ಎಂದರು.

ವೇದಿಕೆ ಮೇಲೆ ಕೊಲ್ಕತ್ತಾದ ಆರ್‌ಸಿಎಫ್‌ನ ರಾಷ್ಟ್ರೀಯ ಮುಖಂಡರಾದ ಅಶಿಮಗಿರಿ, ರಾಜ್ಯ ಉಸ್ತುವಾರಿ ಮುಖಂಡರಾದ ಎಂ.ಗಂಗಾಧರ ಉಪಸ್ಥಿತರಿದ್ದರು. ಸಾಂಸ್ಕೃತಿಕ ಪಟು ಎಂ.ಆರ್.ಭೇರಿ ಕವಿಗೋಷ್ಠಿ ನಡೆಸಿಕೊಟ್ಟರು. ಆದೇಶ ನಗನೂರು ನಿರೂಪಿಸಿದರು.

ಈ ಸಂದರ್ಭದಲ್ಲಿ ವೇಣುಗೋಪಾಲ್ ಕೇರಳ, ಬಾಲಕೃಷ್ಣ, ಪ್ರವಿಂಟ್, ಆಂಧ್ರ ಪ್ರದೇಶದ ರಾಮಣ್ಣ, ವೆಂಕಟೇಶ, ಮದ್ಯಪ್ರದೇಶದ ಫಹೀಮ್, ದೆಹಲಿಯ ನಿರಂಜನ್ ಆಜಾದ್, ಕವಿ, ಮಹೇಂದ್ರ ಕುರ್ಡಿ, ಆರ್. ಹುಚ್ಚರೆಡ್ಡಿ, ಎಚ್.ಆರ್. ಹೊಸಮನಿ, ಮುದಿಯಪ್ಪ, ರಂಜೀತ್, ಅಜೀಜ್ ಜಾಗೀರದಾರ್, ನಿರಂಜನ ಸೇರಿದಂತೆ ಇತರರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...