ರಾಯಚೂರು | ಇತಿಹಾಸದಲ್ಲಿ ಎಂದು ದೊರೆಯದೇ ಇರುವಷ್ಟು ಅನುದಾನ ಜಿಲ್ಲೆಗೆ ಸಿಕ್ಕಿದೆ: ರವಿ ಬೋಸರಾಜ

Date:

ಇತಿಹಾಸದಲ್ಲಿ ಎಂದು ದೊರೆಯದೇ ಇರುವಷ್ಟು ಅನುದಾನವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ಅಭಿವೃದ್ಧಿಗೆ ಪೂರಕವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ರವಿ ಬೋಸರಾಜ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯ, ಸಮಪಾಲು ಪರಿಕಲ್ಪನೆಯಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ್ದ ಭರವಸೆಯನ್ನು ಬಜೆಟ್‌ನಲ್ಲಿ ಘೋಷಿಸುವ ಮೂಲಕ ನುಡಿದಂತೆ ನಡೆಯುತ್ತಿರುವದನ್ನು ಸಾಬೀತು ಪಡಿಸಿದೆ. ದೇಶದಲ್ಲಿ ಯಾವುದೇ ರಾಜ್ಯ ಮಾಡದೇ ಇರುವ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರು ಐದು ಗ್ಯಾರಂಟಿ ಯೋಜನೆಗಳೊಂದಿಗೆ ಅಭಿವೃದ್ಧಿ ಪೂರಕವಾದ ಬಜೆಟ್ ಜನರಿಗೆ ನೀಡಿದೆ ಎಂದರು.

ಕೇಂದ್ರ ಸರ್ಕಾರ ಟೈಕ್ಸ್ ಟೈಲ್ ಪಾರ್ಕ್‌ ಬೇಡಿಕೆಯನ್ನು ಮನ್ನಿಸದೇ ಇರುವಾಗ ರಾಜ್ಯ ಸರ್ಕಾರವೇ ಜವಳಿ ಟೈಕ್ಸ್ ಟೈಲ್ ಪಾರ್ಕ್‌ ನೀಡಿದೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ರಿಗೆ ಮನವರಿಕೆ ಮಾಡಿದ್ದರಿಂದ ಇಲ್ಲಿಯೂ ಟೈಕ್ಸ್ ಟೈಲ್ ಪಾರ್ಕ್‌ ಸ್ಥಾಪನೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಆದರೆ, ಹಿಂದಿನ ಬಿಜೆಪಿ ಸರ್ಕಾರ ಹತ್ತಿ ಬೆಳೆಯದೇ ಇರುವ ಕಲಬುರಗಿಯಲ್ಲಿ ಮೇಘಾ ಟೈಕ್ಸ್ ಟೈಲ್ ಪಾರ್ಕ್‌ ಮಂಜೂರು ಮಾಡಿತ್ತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ ಭರವಸೆ ನೀಡಿದಂತೆ ಐದು ಸಾವಿರ ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ದಿ ಸರ್ಕಾರದ ಆರನೇ ಗ್ಯಾರಂಟಿಯಾಗಿದೆ ಎಂದರು. ಜಿಲ್ಲೆಗೆ ಸಂಬಂಧಿಸಿದಂತೆ ಬಹುದಿನದ ಬೇಡಿಕೆಯಾಗಿದ್ದ 5ಎ ಕಾಲುವೆ ಮಂಜೂರಾಗಿದೆ. ಬಿಜೆಪಿಯವರು 5ಎ ಕಾಲುವೆ ಮಾಡಲು ಆಗುವುದೇ ಇಲ್ಲ ಎಂದು ಹೇಳಿದ್ದರು. ಚುನಾವಣೆಯಲ್ಲಿ ಜನತೆಗೆ ನೀಡಿದ ಭರವಸೆಯಂತೆ ಕಾಲುವೆಗೆ 990 ಕೋಟಿ ರೂ. ನೀಡಲಾಗಿದೆ ಎಂದರು.

ಮಾನ್ವಿ ತಾಲೂಕಿನ ಚಿಕಲಪರ್ವಿ ಹಾಗೂ ಚಿಕ್ಕ ಮಂಚಾಲೆಯಲ್ಲಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಕುರ್ಡಿ ಕೆರೆತುಂಬುವ ಯೋಜನೆ ಹಾಗೂ ತುಂಗಭದ್ರಾ ಎಡದಂಡೆ ಕಾಲುವೆ ಕೊನೆಭಾಗದ ರೈತರಿಗೆ ನೀರೊದಗಿಸಲು ನವಲಿ ಬಳಿ ಜಲಾಶಯ ನಿರ್ಮಾಣಕ್ಕೆ ಬದ್ದತೆ ತೋರಿದೆ. ಆಂಧ್ರ ಮತ್ತು ತೆಲಂಗಾಣ ರಾಜ್ಯದ ಸಹಕಾರದೊಂದಿಗೆ ನಿರ್ಮಾಣಕ್ಕೆ ಭರವಸೆ ನೀಡಲಾಗಿದೆ ಎಂದರು.

ಹಿಂದಿನ ಬಿಜೆಪಿ ಸರ್ಕಾರ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ಭರವಸೆ ನೀಡುತ್ತಲೇ ಬಂದು ಭೂಮಿಯೇ ಇಲ್ಲದೇ ಇದ್ದರೂ ಟೆಂಡರ್ ಪ್ರಕ್ರಿಯೆ ನಡೆಸಿತ್ತು. ಕೇಂದ್ರ ಪರಿಸರ ಇಲಾಖೆ ಅನುಮತಿ ನಿರಾಕರಿಸಿದ್ದು, ಅನುದಾನ ಹಿಂಪಡೆಯಲಾಗಿದೆ. ಜಿಲ್ಲಾಡಳಿತದಿಂದ ಪರ್ಯಾಯ ಸ್ಥಳ ಸಲ್ಲಿಸುವಂತೆ ಸೂಚಿಸಲಾಗಿದೆ. ಆದರ, ಜಿಲ್ಲಾಡಳಿತ ಪರ್ಯಾಯ ಸ್ಥಳವೇ ತೋರಿಸಿಲ್ಲ. 108 ಕುಟುಂಬಗಳಿದ್ದು ಪರ್ಯಾಯ ವ್ಯವಸ್ಥೆ ಮಾಡಿ ಭೂಮಿ ನೀಡಲು 220 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ. ಈ ಹಿಂದೆ ಕೆಕೆಆರ್‌ಡಿಬಿಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನ ಬಳಸಿಕೊಂಡಿದ್ದನ್ನು ರದ್ದುಗೊಳಿಸಲಾಗಿದೆ ಎಂದರು.

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ನೀಡಿದ್ದು ರಾಯಚೂರಿನಲ್ಲಿ ವಿಮಾನ ನಿಲ್ದಾಣ ಮಾಡಲಾಗುತ್ತದೆ. ಮೆಣಸಿನಕಾಯಿ ಪಾರ್ಕ್‌ ಹಾಗೂ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಅನುದಾನ ನೀಡಲಿದೆ. ಇತಿಹಾಸದಲ್ಲಿಯೇ ಇಷ್ಟೊಂದು ಅನುದಾನ ಜಿಲ್ಲೆಗೆ ದೊರೆತಿಲ್ಲ. ಕೇಂದ್ರ ಸರ್ಕಾರ ಮಹಾತ್ವಾಂಕ್ಷೆ ಜಿಲ್ಲೆಯಂದು ರಾಯಚೂರನ್ನು ಗುರುತಿಸಿದ್ದರೂ ಯಾವುದೇ ಅನುದಾನ ನೀಡಿಲ್ಲ. ಏಮ್ಸ್ ಮಂಜೂರಾತಿಯಲ್ಲಿಯೂ ಅನ್ಯಾಯ ಮಾಡಲು ಹೊರಟಿದೆ. ಪ್ರಧಾನ ಮಂತ್ರಿಗಳ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿಲ್ಲ. ಏಮ್ಸ್ ಮಂಜೂರಾತಿಗಾಗಿ ಸರ್ಕಾರ ನಿರಂತರ  ಪ್ರಯತ್ನ ಮುಂದುವರಿಸಿದೆ ಎಂದರು.

ಒಪೆಕ್ ಆಸ್ಪತ್ರೆ ಖಾಸಗಿಯವರೊಂದಿಗೆ ಸೇರಿ ನಿರ್ವಹಣೆ ಮಾಡಲು ಮಾತುಕತೆ ನಡೆಯತ್ತಿದ್ದು ಸಂಸ್ಥೆಯೊಂದು ಮುಂದೆ ಬಂದಿದೆ. ಶೀಘ್ರದಲ್ಲಿ ಒಪೆಕ್ ಅತ್ಯಾಧುನಿಕ ಸೇವೆಗಳು ಎಪಿಎಲ್, ಬಿಪಿಎಲ್ ಕುಟುಂಬಗಳಿಗೆ ದೊರೆಯಲಿದೆ ಎಂದರು. ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆಯಿಲ್ಲ. ಎಲ್ಲರೂ ಸೇರಿ ಜಿಲ್ಲೆ ಅಭಿವೃದ್ದಿಗೆ ಒತ್ತು ನೀಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಹ್ಮದ ಶಾಲಂ, ರವಿ ಪಾಟೀಲ್, ನರಸಿಂಹಲು ಮಾಡಗಗಿರಿ, ಜಿಂದಪ್ಪ, ಆಂಜಿನೇಯ್ಯ ಕುರುಬದೊಡ್ಡ, ಚಂದ್ರಶೇಖರ ಪೋಗಲ್, ಯು.ಗೋವಿಂದ ರೆಡ್ಡಿ, ಬಿ. ರಮೇಶ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...