ಲಿಂಗಸುಗೂರು | ಭಕ್ತರ ವೇಷದಲ್ಲಿ ಬಂದು ಮಠದಿಂದ ₹40 ಲಕ್ಷ ಮೌಲ್ಯದ ಸೊತ್ತು ದರೋಡೆಗೈದ ಕಳ್ಳರು!

Date:

ರಾಯಚೂರು ಜಿಲ್ಲೆಯ ಲಿಂಗಸುಗೂರುನಲ್ಲಿರುವ ಇಳಕಲ್ಲ ವಿಜಯ ಮಹಾಂತೇಶ್ವರ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಕಳ್ಳರಿಬ್ಬರು, ಬರೋಬ್ಬರಿ ₹40 ಲಕ್ಷ ಮೌಲ್ಯದ ಸೊತ್ತನ್ನು ದರೋಡೆಗೈದ ಘಟನೆ ಗುರುವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ಗುರುವಾರ ಮಧ್ಯರಾತ್ರಿ 12ರಿಂದ 12.30ರ ನಡುವೆ ಮಠಕ್ಕೆ ಬಂದಿದ್ದ ಅಪರಿಚಿತ ವ್ಯಕ್ತಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕೈಯಲ್ಲಿ ಪಿಸ್ತೂಲ್ ಹಿಡಿದು ಜೀವ ಬೆದರಿಕೆ ಹಾಕುವ ಮೂಲಕ ಕಪಾಟು ಹಾಗೂ ಟ್ರಂಕುಗಳಲ್ಲಿದ್ದ 7 ತೊಲ ಚಿನ್ನ, 10 ಕೆ.ಜಿ ಬೆಳ್ಳಿ, ಅಂದಾಜು ₹20 ಲಕ್ಷ ನಗದು ದೋಚಿಕೊಂಡು ಹೋಗಿರುವುದಾಗಿ ಮಠದ ಉಸ್ತುವಾರಿಗಳು ಲಿಂಗಸುಗೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪಾದ ಮತ್ತು ಇಷ್ಟಲಿಂಗ ಪೂಜೆಗೆ ಬಳಸುವ ಬೆಳ್ಳಿ ಸಾಮಗ್ರಿಗಳು, ಚಿನ್ನದ ಕರಡಿಗೆ ಮತ್ತು ಸುತ್ತುಂಗುರಗಳನ್ನು ಲೂಟಿ ಮಾಡಿಕೊಂಡು ಹೋಗಿದ್ದಾರೆ ಎಂದು ಶಾಖಾ ಮಠದ ಸಿದ್ದಲಿಂಗ ಸ್ವಾಮೀಜಿ, ಲಿಂಗಸುಗೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಿಂಗಸುಗೂರು ದರೋಡೆ

“ಮಠದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಸೆರೆಯಾಗಿದೆ. ಗುರುವಾರ ಮಧ್ಯರಾತ್ರಿ 12ರಿಂದ 12.30ರ ನಡುವೆ ಈ ದರೋಡೆ ನಡೆದಿದೆ” ಎಂದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಲಿಂಗಸುಗೂರು ಪೊಲೀಸರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಪೊಲೀಸ್‌ ಇನ್‌ಸ್ಪೆಕ್ಟ‌ರ್ ಪುಂಡಲೀಕ್ ಪಟಾತರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ ಹರೀಶ್, ಆರ್ ಶಿವಕುಮಾರ್, ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

ಇದನ್ನು ಓದಿದ್ದೀರಾ? 21 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಸ್ಥಳ ಮಹಜರಿನ ವೇಳೆ ಲಿಂಗಸುಗೂರು ಠಾಣೆಯ ಪಿಎಸ್‌ಐ ಹನಮಂತಪ್ಪ, ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ಶರ‍ಣ ಬಸಪ್ಪ, ಸೋಮಪ್ಪ, ಸಿದ್ದಪ್ಪ, ಭೀಮಣ್ಣ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...