ರಾಯಚೂರು | ಚಿನ್ನದ ಗಣಿಯಿರುವ ತಾಲೂಕಿಗಿಲ್ಲ ಪ್ರೌಢಶಾಲೆ; ಅರ್ಧಕ್ಕೆ ಶಿಕ್ಷಣ ಮೊಟಕು

Date:

ಕರ್ನಾಟಕ ರಾಜ್ಯದ ಏಕೈಕ ಚಿನ್ನದ ಗಣಿ‌ ಇರುವ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಉರ್ದು ಮಾಧ್ಯಮದ ಪ್ರೌಢಶಾಲೆ ಇಲ್ಲದೆ ನೂರಾರು ಮಕ್ಕಳು ಶಿಕ್ಷಣವನ್ನು ಅರ್ಧದಲ್ಲಿಯೇ ಮೊಟಕುಗೊಳಿಸುವಂತಾಗಿದೆ.

ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂದು ಹಣೆಪಟ್ಟಿ ಕಟ್ಟಿಕೊಂಡಿರುವ ರಾಯಚೂರು ಜಿಲ್ಲೆಯಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರೂ ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ದೊರೆಯುತ್ತಿಲ್ಲ.

ಗುರುಗುಂಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ಇದ್ದು ನೂರಾರು ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ 8ನೇ ತರಗತಿ ವರೆಗೆ ಮಾತ್ರ ಇದ್ದು‌, 9ರಿಂದ 10ನೇ ತರಗತಿಗೆ ಅಭ್ಯಾಸ ಮಾಡಲು ಲಿಂಗಸೂಗೂರು ತಾಲೂಕಿಗೆ ಹೋಗಬೇಕಿದೆ. ಗುರುಗುಂಟಾ ಗ್ರಾಮದಿಂದ 20 ಕಿಮೀ ಪ್ರಯಾಣ ಬೆಳೆಸಿ ಹೋಗಬೇಕಿದೆ.‌ ಸರಿಯಾದ ಸಮಯಕ್ಕೆ ಬಸ್ ಇಲ್ಲದೇ ಬಸ್‌ಗಾಗಿ ಗಂಟೆಗಟ್ಟಲೆ ಕಾಯಬೇಕು. ಇದರಿಂದ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉರ್ದು ಶಾಲೆ ಮಕ್ಕಳು

ಈ ಗ್ರಾಮದಲ್ಲಿ ಮುಸ್ಲಿಂ, ಪರಿಶಿಷ್ಟ ಜಾತಿ,‌ ಪರಿಶಿಷ್ಟ ಪಂಗಡದ ಸಮುದಾಯದವರೇ ಹೆಚ್ಚಾಗಿದ್ದು, ಶೈಕ್ಷಣಿಕವಾಗಿ‌ ಹಿಂದುಳಿದ ಸಮುದಾಯದ ಮಕ್ಕಳಿಗೆ‌ ಉನ್ನತ ಶಿಕ್ಷಣ ಸಿಗಬೇಕಾಗಿದೆ. ಆದರೆ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಮಾಧ್ಯಮಿಕ ಶಿಕ್ಷಣವೂ ಗಗನಕುಸುಮವಾಗಿದೆ.

ಆರ್‌ಟಿಇ ಕಾಯ್ದೆ 2009ರ ಪ್ರಕಾರ ಪ್ರತಿ ಐದು ಕಿಲೋಮೀಟರ್ ಒಳಗಡೆ ಒಂದು ಪ್ರೌಢಶಾಲೆಯನ್ನು ತೆರೆಯಬೇಕು. ಆದರೆ ಸರಿ ಸುಮಾರು 8 ವರ್ಷಗಳಾದರೂ ಉನ್ನತೀಕರಿಸಿದ ಶಾಲೆಯನ್ನು ಪ್ರೌಢ ಶಾಲೆಯಾಗಿ ಉನ್ನತೀಕರಿಸಿಲ್ಲ.

ಪಾಲಕರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಐತಿಹಾಸಿವಾಗಿ ಪ್ರಸಿದ್ಧಿ ಪಡೆದ ಹಾಗೂ ಚಿನ್ನದ ಗಣಿಯಿರುವ ತಾಲೂಕಿನಲ್ಲಿಯೇ ಇಂತಹ ಗ್ರಾಮದಲ್ಲಿ ಸರ್ಕಾರ ಪ್ರೌಢಶಾಲೆ ಮಂಜೂರು ಮಾಡದೆ ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಮುಖಂಡ ಗುಲಾಮ್ ಹಫೀಜ್ ಸಾಬ್ ಈ ದಿನ.ಕಾಮ್‌ ಜತೆ ಮಾತನಾಡಿ, “ಗುರುಗುಂಟ ಗ್ರಾಮವು ಸುತ್ತಮುತ್ತಲಿನ 40 ಗ್ರಾಮಗಳಿಗೆ ಕೇಂದ್ರ ಬಿಂದು. ಇಲ್ಲಿ ಸುಮಾರು 15,000 ಜನಸಂಖ್ಯೆ ಇದೆ. ಉರ್ದು ಶಾಲೆಯಲ್ಲಿ 09ನೇ ತರಗತಿಗೆ ಓದುವುದಕ್ಕೆ ಲಿಂಗಸೂಗೂರು ತಾಲೂಕಿಗೆ ಹೋಗಬೇಕು. ಲಿಂಗಸೂಗೂರಿಗೆ ಹೋಗಿ ಬರಲು‌ ಮಕ್ಕಳು ಹೈರಾಣಾಗುತ್ತಾರೆ. ಸರಿಯಾದ ಸಮಯಕ್ಕೆ ಹೋಗಲು ಆಗದೇ ಅನೇಕರು ಶಿಕ್ಷಣ ಬಿಟ್ಟಿದ್ದಾರೆ. ಬಸ್‌ಗಳಲ್ಲಿ‌ ಸೀಟು ಸಿಗದೆ ಕೆಲವೊಮ್ಮೆ ಚಾಲಕರು ನಿಲ್ಲಿಸದೆ ಹೋಗುತ್ತಾರೆ. ಗ್ರಾಮದಲ್ಲಿಯೇ ಪ್ರೌಢಶಾಲೆ ತೆರೆದರೆ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು” ಎಂದು ಹೇಳುತ್ತಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಭಾರತೀಯರಿಗೆ ಗೌರವದ ಬದುಕು ನೀಡಿದ ಗ್ರಂಥ ಸಂವಿಧಾನ: ಶಾಕು ಬೋಧಿಧಮ್ಮ

ಶಾಲೆಯ ಶಿಕ್ಷಕ ಮೊಹಮ್ಮದ್ ಅಜೀಮ್ ಬಿಸ್ತಾ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಶಾಲೆಯಲ್ಲಿ 6 ರಿಂದ 8ನೇ ತರಗತಿಯವರೆಗೆ 75 ವಿದ್ಯಾರ್ಥಿಗಳು ಹಾಗೂ 8ನೇ ತರಗತಿಯಲ್ಲಿ 26 ವಿದ್ಯಾರ್ಥಿಗಳಿದ್ದು, ಪಕ್ಕದ ಕೋಠಾ ಗ್ರಾಮದ 8ನೇ ತರಗತಿಯಲ್ಲಿ ಸುಮಾರು 20 ಮಕ್ಕಳಿದ್ದಾರೆ. ಗುರುಗುಂಟಾ ಗ್ರಾಮವು ಹೋಬಳಿ ಕೇಂದ್ರವಾಗಿದ್ದು, ಒಂದು ವೇಳೆ ಪ್ರೌಢಶಾಲೆಯನ್ನು ನಮ್ಮ ಗ್ರಾಮದಲ್ಲಿ ಪ್ರಾರಂಭಿಸಿದ್ದಲ್ಲಿ ಗುರುಗುಂಟಾ ಗ್ರಾಮದ ಮಕ್ಕಳ ಜೊತೆಗೆ ಕೋಠಾ ಗ್ರಾಮದ ಮಕ್ಕಳಿಗೂ ಲಾಭವಾಗುತ್ತದೆ. ಇದರಿಂದ ಶಾಲೆಯಿಂದ ಹೊರಗುಳಿಯುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತದೆ. ಜತೆಗೆ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಹಾಯವಾಗುತ್ತದೆ” ಎಂದು ಮನವಿ ಮಾಡಿದರು.

mdrafi
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...