ರಾಯಚೂರು | ಶಾಸಕಿ ಅಧಿಕಾರ ದುರುಪಯೋಗ ಪ್ರಶ್ನಿಸಿದ್ದಕ್ಕೆ ಬೆದರಿಕೆ; ಸೂಕ್ತ ಕ್ರಮಕ್ಕೆ ಸ್ಪೀಕರ್‌ಗೆ ಮನವಿ

Date:

ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಅವರ ಅಧಿಕಾರ ದುರುಪಯೋಗದ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಭೀಮ್‌ ಆರ್ಮಿ ದೇವದುರ್ಗ ತಾಲ್ಲೂಕಾಧ್ಯಕ್ಷ ವಿಶ್ವನಾಥ ಬಲ್ಲಿದೇವ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕೂಡಲೇ ಶಾಸಕಿ ವಿರುದ್ದ ಪ್ರಕರಣ ದಾಖಲಿಸಿ ಶಿಸ್ತು ಕ್ರಮಕೈಗೊಳ್ಳಬೇಕು ಹಾಗೂ ವಿಶ್ವನಾಥ ಬಲ್ಲಿದೇವ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಭೀಮ್‌ ಆರ್ಮಿ ಜಿಲ್ಲಾ ಘಟಕ ವತಿಯಿಂದ ವಿಧಾನಸಭೆ ಅಧ್ಯಕ್ಷರು ಯುಟಿ.ಖಾದರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕಳೆದ ಒಂದು ವರ್ಷದಿಂದ ಆಡಳಿತಾತ್ಮಕ ವಿಚಾರಗಳನ್ನು ಪ್ರಶ್ನಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕರ ಬೆಂಬಲಿಗರಿಂದ ನನಗೆ ನಿರಂತರವಾಗಿ ಜೀವ ಬೆದರಿಕೆಗಳು ಬರುತ್ತಿವೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆ, ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮಾನ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಪ್ರಕರಣ ದಾಖಲಿಸಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನನ್ನ ಜೀವಕ್ಕೆ ಯಾವುದೇ ಅಪಾಯ ಸಂಭವಿಸಿದರೆ, ಅದಕ್ಕೆ ಸಂಬಂಧಿಸಿದ ಶಾಸಕರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ.

ಶಾಸಕಿ ಕರೆಮ್ಮ.ಜಿ.ನಾಯಕ್ ಅವರು ಈಗಾಗಲೇ ಪ್ರವಾಸಿ ಮಂದಿರದಲ್ಲಿ ಅನಧಿಕೃತವಾಗಿ ಬೃಹತ್ ಶಾಸಕರ ಕಾರ್ಯಾಲಯ ಎಂಬ ನಾಮಫಲಕ ಅಳವಡಿಸಿಕೊಂಡು, ಅಲ್ಲಿ ಸಂಘ–ಸಂಸ್ಥೆಗಳ ಸಭೆಗಳನ್ನು ನಡೆಸಿದಂತೆ ಪ್ರದರ್ಶಿಸಿ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದರು ಹಾಗೂ ತಹಶೀಲ್ದಾರ್ ಕಚೇರಿಯ ಮುಖ್ಯ ಕುರ್ಚಿಯಲ್ಲಿ ಕುಳಿತು ಸಭೆ ನಡೆಸಿರುವ ವಿಚಾರವನ್ನು ಪ್ರಶ್ನಿಸಿ ಪತ್ರಿಕಾ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ನನಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಂಪಿಸಿಎಲ್- ಕೃಷ್ಣಬ್ರಿಡ್ಜ್ ರಸ್ತೆಯಲ್ಲಿ ನಿಲ್ಲದ ರಸ್ತೆ ಅಪಘಾತ

ಆಡಳಿತಾತ್ಮಕ ನಿಯಮಗಳನ್ನು ಉಲ್ಲಂಘಿಸಿ ಜನಪ್ರತಿನಿಧಿಗಳು ಅಧಿಕಾರ ದುರುಪಯೋಗ ಮಾಡಿರುವುದನ್ನು ಬಹಿರಂಗಪಡಿಸಿದ್ದಕ್ಕೆ ಈ ರೀತಿ ಬೆದರಿಕೆ ನೀಡಲಾಗುತ್ತಿದೆ. ಕೂಡಲೇ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಂಘಟನಾಕಾರರು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...