ರಾಯಚೂರು | ನ.27ರಿಂದ 3 ದಿನಗಳ ರಾಷ್ಟ್ರ ಮಟ್ಟದ ವಿದ್ಯಾರ್ಥಿ ಸಮ್ಮೇಳನ

Date:

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ವತಿಯಿಂದ ನವೆಂಬರ್ 27ರಿಂದ ದೆಹಲಿಯಲ್ಲಿ ಮೂರು ದಿನಗಳ ಕಾಲ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಐಡಿಎಸ್ಒ ರಾಜ್ಯ ಘಟಕದ ಕಾರ್ಯದರ್ಶಿ ಶಿಲ್ಪಾ ಬಿ ಕೆ ತಿಳಿಸಿದರು.

ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಕೇಂದ್ರ ಹಾಗೂ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಿಸುವ ಬದಲು ಗೊಂದಲ ಮತ್ತು ಮೌಢ್ಯ ಬಿತ್ತುವ ಕೆಲಸ ಮಾಡಿ ಸಾಂಸ್ಕೃತಿಕ ಅದಂಪತನಗೊಳಿಸುತ್ತಿದೆ. ಶಿಕ್ಷಣ ವ್ಯಾಪಾರೀಕರಣವಾಗಿ ಸರ್ಕಾರಿ ಶಾಲೆಗಳು ದುಃಸ್ಥಿತಿಗೆ ತಲು‍ಪಿವೆ. ಇಂತಹ ಸಂದರ್ಭದಲ್ಲಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಸಾಮಾಜಿಕ ಚಿಂತನೆ ಮೂಡಿಸಬೇಕಿದೆ” ಎಂದು ಹೇಳಿದರು.

“ನೂತನ ಶಿಕ್ಷಣ ನೀತಿ(ಎನ್‌ಇಪಿ) ಕರ್ನಾಟಕ ರಾಜ್ಯದಲ್ಲಿ ರದ್ದಾಗಿದೆ. ಆದರೂ ದೇಶದ ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿದೆ. ಸರ್ಕಾರಿ ಶಾಲೆಗಳು ಮೂಲಸೌಕರ್ಯವಿಲ್ಲದೇ ಮುಚ್ಚುವಂತಾಗಿವೆ. ಬಿಜೆಪಿ ಜಾರಿಗೊಳಿಸಿದ ಯೋಜನೆಗಳು, ನೀತಿಗಳನ್ನೇ ರಾಜ್ಯ ಸರ್ಕಾರ ಮುಂದುವರೆಸುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ನಿರಾಶ್ರಿತರಿಗೆ ಕಂಬಳಿ, ಉಣ್ಣೆ ಬಟ್ಟೆ ವಿತರಣೆ

“ಶಿಕ್ಷಣ ವ್ಯವಸ್ಥೆಯ ಕುರಿತು ಚರ್ಚೆಗಳು, ಸಂವಾದ, ಗೋಷ್ಠಿಗಳು ಈ ಸಮ್ಮೇಳನದಲ್ಲಿ ನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ 500ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ಗೋಷ್ಠಿಯಲ್ಲಿ ವಿದ್ಯಾರ್ಥಿ ಮುಖಂಡ ಪೀರ್ ಸಾಬ್, ಬಸವರಾಜ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...