ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಚಲಾಯಿಸುತ್ತಿದ್ದ ಮೂವರು ಯುವಕರು ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ರಾಯಚೂರು ನಗರದ ಬಸವೇಶ್ವರ ರಸ್ತೆಯಲ್ಲಿ ನಡೆದಿದೆ.
ರಿಹಾನ್ (20) ಮಹಮ್ಮದ್ ಅಲಿ (19), ಹಾಗೂ ಫಯಾಜ್ (20) ಮೃತಪಟ್ಟವರು ಒಂದೇ ಬಡಾವಣೆಯ ನಿವಾಸಿ ಎಂದು ಗುರುತಿಸಲಾಗಿದೆ.
ನಗರದ ಯರಗೇರಾ ರಸ್ತೆಯಲ್ಲಿ ನಡೆಯುತ್ತಿರುವ ಕ್ರಿಕೆಟ್ ಟೂರ್ನಮೆಂಟ್ ನೋಡಿ ಮನೆಗೆ ಹಿಂತಿರುಗುವಾಗ ಹಿಂಬದಿಯಿಂದ ಮಿನಿ ಲಾರಿ ಗುದ್ದಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ಮಾಡಶಿರವಾರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಪ್ರತಿಭಟನೆ
ಘಟನೆ ಬಳಿಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.





