ರಾಯಚೂರು | ರಾಜಾ ಅಮರೇಶ್ವರ ನಾಯಕರಿಗೆ ಟಿಕೆಟ್; ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ

Date:

ಬಿ ವಿ ನಾಯಕರಿಗೆ ಟಿಕೆಟ್ ನೀಡದೇ ಇರುವ ಕುರಿತು ಕಾರ್ಯಕರ್ತರಲ್ಲಿ ಅಸಮಧಾನವಿದ್ದು, ಮಾರ್ಚ್‌ 27ರಂದು ಸಮಾನ ಮನಸ್ಕ ಅಭಿಮಾನಿಗಳಿಂದ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ರಾಯಚೂರು ಜಿಲ್ಲೆಯ ಮಾನ್ವಿ ಟಿಎಪಿಎಂಎಸ್ ಅಧ್ಯಕ್ಷ ತಿಮ್ಮಾರೆಡ್ಡಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಬಿಜೆಪಿ ಮುಖಂಡರು ಟಿಕೆಟ್‌ ನೀಡುವ ಭರವಸೆ ಮೇಲೆಯೇ ಬಿ ವಿ ನಾಯಕ ಅವರು ಲೋಕಸಭಾ ಕ್ಷೇತ್ರದ ಕಾರ್ಯಕರ್ತರು, ಮುಖಂಡರನ್ನು ಭೇಟಿ ಮಾಡಿ ಸಿದ್ದತೆ ನಡೆಸಿದ್ದರು. ಆದರೆ ಪಕ್ಷದ ವರಿಷ್ಠರು ರಾಜಾ ಅಮರೇಶ್ವರ ನಾಯಕರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಹಾಲಿ ಸಂಸದರಾಗಿರುವ ಅಮರೇಶ್ವರ ನಾಯಕ ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಸಂಪರ್ಕ ಹೊಂದಿಲ್ಲ” ಎಂದು ಹೇಳಿದರು.

“ಅಧಿಕಾರದ ಅವಧಿಯಲ್ಲಿ ಪಕ್ಷದ ಕಾರ್ಯಕರ್ತರಿಂದಲೂ ದೂರವಿದ್ದವರಿಗೆ ಟಿಕೇಟ್ ನೀಡಿರುವ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕೆಂಬುದು ಕಾರ್ಯಕರ್ತರ ಒತ್ತಾಯವಾಗಿದೆ. ಪಕ್ಷ ನಡೆಸಿರುವ ಸರ್ವೆಗಳಲ್ಲಿಯೂ ಬಿ ವಿ ನಾಯಕ ಅಭ್ಯರ್ಥಿಯಾದರೆ ಗೆಲ್ಲುವ ಅವಕಾಶವಿದೆ ಎಂಬ ಮಾಹಿತಿಯಿದೆ. ಆದರೆ ಏಕಾಏಕಿ ಬದಲಾವಣೆ ಮಾಡಲು ಕಾರಣ ಗೊತ್ತಾಗಿಲ್ಲ. ಪಕ್ಷದ 8 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು, ಅಭಿಮಾನಿಗಳು ಸಭೆಗೆ ಆಗಮಿಸಲಿದ್ದು ಬಿ ವಿ ನಾಯಕರಿಗೆ ಟಿಕೆಟ್ ಘೋಷಿಸುವಂತೆ ಒತ್ತಾಯಿಸಲಾಗುತ್ತದೆ. ಪಕ್ಷದ ತೀರ್ಮಾನವನ್ನು ಗೌರವಿಸಬೇಕಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ತನ್ವೀರ್‌ಗೆ ಹಳೇ ಮೈಸೂರು ಭಾಗದ ‘ಜವಾಬ್ದಾರಿ’

ಈ ಸಂದರ್ಭದಲ್ಲಿ ಜಂಬಣ್ಣ ನಿಲೋಗಲ್, ವೀರಭದ್ರಪ್ಪಗೌಡ ಭೋಗಾವತಿ, ವೀರೇಶನಾಯಕ, ಮಹಾಂತೇಶ ಪಾಟೀಲ್ ಅತ್ತನೂರು, ಮಲ್ಲಿಕಾರ್ಜುನ ಜಕ್ಕಲದಿನ್ನಿ, ನಾಗಲಿಂಗಸ್ವಾಮಿ, ನರಸಿಂಹರಾವ್ ಕುಲಕರ್ಣಿ, ವೀರನಗೌಡ ಗಣದಿನ್ನಿ ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...