ರಾಯಚೂರು | ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

Date:

ಸ್ವಾತಂತ್ರ್ಯಕ್ಕೋಸ್ಕರ ತನ್ನ ಸ್ವಂತ ಮಕ್ಕಳನ್ನೇ ಒತ್ತೆಯಿಟ್ಟು ಹೋರಾಡಿದ ವೀರ ಪರಾಕ್ರಮಿ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ಎಂದು ರಾಯಚೂರು ನಗರ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮೊಹಮ್ಮದ್ ಶಾಲಂ ಹೇಳಿದರು.

ರಾಯಚೂರು ನಗರದ ಈದ್ಗಾ ಮೈದಾನದ ಬಳಿಯ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಹಜರತ್ ಟಿಪ್ಪು ಸುಲ್ತಾನ್ ರವರ 275ನೇ ಜಯಂತಿ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

“ಟಿಪ್ಪು ಸುಲ್ತಾನ್ ಕೇವಲ ಒಂದು ಧರ್ಮಕ್ಕೆ ಸೀಮಿತರಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಬ್ರಿಟಿಷರನ್ನು ನಡುಗಿಸಿದ್ದರು. ಅಂತಹ ಪರಾಕ್ರಮಿ ವೀರನ ವಿಚಾರಗಳನ್ನು ಸಮಾಜದಲ್ಲಿ ಪ್ರಚಾರಪಡಿಸಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಮುಖಂಡ ನರಸಿಂಹಲು ಮಾಡಗಿರಿ ಮಾತನಾಡಿ, “ಟಿಪ್ಪು ಸುಲ್ತಾನ್ ಜಾತ್ಯತೀತ ವ್ಯಕ್ತಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮೈಸೂರಿನ ಹುಲಿಯೆಂದು ಖ್ಯಾತಿ ಪಡೆದಿದ್ದಾರೆ. ಅವರನ್ನು ಒಂದು ಧರ್ಮದ ಆಧಾರದ ಮೇಲೆ ನೋಡಿ ತಾರತಮ್ಯ ಮಾಡಬಾರದು. ಏನೇ ಭಿನ್ನಾಭಿಪ್ರಾಯಗಳಿದ್ದರೂ ಬದಿಗೊತ್ತಿ ಅವರ ವ್ಯಕ್ತಿತ್ವ, ತ್ಯಾಗ, ಬಲಿದಾನವನ್ನು ಸ್ಮರಿಸಬೇಕಿದೆ” ಎಂದು ಕರೆ ನೀಡಿದ ಅವರು, ನಗರದ ಟಿಪ್ಪುಸುಲ್ತಾನ್ ವೃತ್ತ ಅಭಿವೃದ್ಧಿಗೊಳಿಸಿ ಸ್ಮಾರಕ ನಿರ್ಮಾಣ ಮಾಡಬೇಕು” ಎಂದು ಹೇಳಿದರು.

ಅಂಬೇಡ್ಕರ್ ಸೇನೆಯ ಮುಖಂಡ ವಿಶ್ವನಾಥ ಪಟ್ಟಿ ಮಾತನಾಡಿ, “ಟಿಪ್ಪು ಸುಲ್ತಾನ್ ತಮ್ಮ ಮಕ್ಕಳನ್ನು ಒತ್ತೆಯಿಟ್ಟು ದೇಶಕ್ಕಾಗಿ ಮಡಿದಿದ್ದಾರೆ. ಬ್ರಿಟಿಷರರಿಗೆ ಸಿಂಹ ಸ್ವಪ್ನವಾಗಿದ್ದ ಆತನ ಧೈರ್ಯ, ಸಾಹಸ ಅನೇಕರಿಗೆ ಮಾದರಿಯಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಪ್ರೇರಣೆಯಾಗಿತ್ತು. ಹಾಗಾಗಿ ಮುಂದಿನ ಜಯಂತಿಯ ವೇಳೆಗೆ ರಾಜ್ಯ ಸರ್ಕಾರ ಇಂತಹ ಮಹಾನ್‌ ನಾಯಕನ ಪುತ್ಥಳಿ ನಿರ್ಮಾಣ ಮಾಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ: ದೇಗುಲಕ್ಕೆ ದಲಿತರು ಬಂದರೆಂದು ಉತ್ಸವ ಮೂರ್ತಿಯನ್ನೇ ಹೊರತಂದ ಸವರ್ಣೀಯರು

ಕಾರ್ಯಕ್ರಮಕ್ಕೂ ಮುನ್ನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ಭಾಗವಹಿಸಿ ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿದರು. ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ನಗರಸಭೆಯ ಉಪಾಧ್ಯಕ್ಷ ಸಾಜೀದ್ ಸಮೀರ್, ಮುಖಂಡರಾದ ಡಾ.ರಜಾಕ್ ಉಸ್ತಾದ್, ಬಷಿರುದ್ದೀನ್, ಅಬ್ದುಲ್ ಹೈ ಫೇರೋಜ್, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಫರೀದ್ ಖಾನ್, ಜಾವೀದ್ ವಕೀಲ್, ತೌಸೀಫ್ ಅಹ್ಮದ್, ಮಹಮ್ಮದ್ ಶಫಿ, ನಜೀರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...