ರಾಯಚೂರು | ಟೋಲ್ ಗೇಟ್ ತೆರವಿಗೆ ಶಾಸಕಿ ಕರೆಮ್ಮ ಆಗ್ರಹ

Date:

ದೇವದುರ್ಗ ವ್ಯಾಪ್ತಿಯ ಕಲ್ಮಲಾ – ತಿಂಥಿಣಿ ಹೋಗುವ ರಾಜ್ಯ ಹೆದ್ದಾರಿಯ ಮಧ್ಯೆ ಅವೈಜ್ಞಾನಿಕವಾಗಿ ಎರಡು ಟೋಲ್ ಗೇಟ್ ಗಳನ್ನು ನಿರ್ಮಿಸಿ ಕ್ಷೇತ್ರದ ಜನರ ವಸೂಲಿ ಮಾಡುತ್ತಿದ್ದಾರೆ. ಟೋಲ್ ಗೇಟ್‌ಗಳನ್ನು ತೆರವು ಮಾಡುವಂತೆ ಆಗ್ರಹಿಸಿ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ತ್ರೈ ಮಾಸಿಕ ಕೆಡಿಪಿ ಸಭೆಯಲ್ಲಿ ನೆಲದ ಮೇಲೆ ಕುಳಿತು ಪ್ರತಿಭಟಿಸಿದರು.

ದೇವದುರ್ಗ ಕ್ಷೇತ್ರದಲ್ಲಿ 40 ಕಿಮೀ ಮಧ್ಯೆ ಎರಡು ಟೋಲ್ ಅಳವಡಿಸಲಾಗಿದೆ. ಟೋಲ್ ಗೇಟ್ ತೆರವುಗೊಳಿಸುವಂತೆ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನಿಸಿದ್ದೆ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರ ಗಮನಕ್ಕೆ ತಂದರೂ ಟೋಲ್ ತೆಗೆದಿಲ್ಲ ಎಂದು ಅಸಮಾಧಾನಗೊಂಡು ಆಗ್ರಹಿಸಿದರು.

ಟೋಲ್ ಗೇಟ್ ವಿರುದ್ಧ ಹೋರಾಟ ಮಾಡಿದರು ಸ್ಪಂದಿಸಿಲ್ಲ. ನನ್ನ ಬೆಂಬಲಿಗರು ಹೋರಾಟ ಮಾಡಿದರೆ ಕೇಸ್ ದಾಖಲಿಸಲಾಗುತ್ತಿದೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಇವರ ಒತ್ತಾಯದ ಮೇರೆಗೆ ಟೋಲ್ ಗೇಟ್ ತೆರವು ಗೊಳಿಸಲಾಗಿದೆ. ಆದರೆ ದೇವದುರ್ಗ ತಾಲೂಕಿನ ಟೋಲ್ ರದ್ದು ಗೊಳಿಸದೆ ಸರಕಾರ ತಾರತಮ್ಯ ಮಾಡುತ್ತಿದೆ. ಕಲ್ಬುಗಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಗೇಟ್ ನಿರ್ಮಿಸಿಲ್ಲ. ದೇವದುರ್ಗ ಕ್ಷೇತ್ರದಲ್ಲಿ 40 ಕಿಮೀ ಮಧ್ಯೆ ಎರಡು ಟೋಲ್ ಅಳವಡಿಸಿ ನನ್ನ ಹೆಸರಿಗೆ ಮಸಿ ಬಳೆಯಲು ದುರುದ್ದೇಶದಿಂದ‌ ಟೋಲ್ ಹಾಕಿದ್ದಾರೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ‘ಕೆಸರಲ್ಲಿ ಶಾಲೆಯೋ, ಶಾಲೆಯಲ್ಲಿ ಕೇಸರೋʼ

ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಕೂಡಲೇ ಟೋಲ್ ತಾತ್ಕಲಿಕವಾಗಿ ಬಂದ್ ಮಾಡಲು ಡಿಸಿಗೆ ಸೂಚಿಸಿದರು. ಸಂಬಂದಿಸಿದ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸುವದಾಗಿ ಭರವಸೆ ನೀಡಿದರು.




WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...