ರಾಯಚೂರು | ತೊಗರಿ ಖರೀದಿ ಕೇಂದ್ರ ಆರಂಭ

Date:

ಜಿಲ್ಲಾಡಳಿತ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಯರಗೇರಾ ವತಿಯಿಂದ ತಾಲೂಕಿನ ಯರಗೇರಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕಚೇರಿಯಲ್ಲಿ ತೊಗರಿ ಬೆಳೆ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹ್ಮದ್ ನಿಜಾಮುದ್ದೀನ್, “ರೈತರು ಬೆಳೆದ ತೊಗರಿಗೆ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಎಕರೆಗೆ ಕನಿಷ್ಟ 4 ಕ್ವಿಂಟಲ್ ಗರಿಷ್ಠ 40 ಕ್ವಿಂಟಲ್ ಖರೀದಿ ಮಿತಿ ನಿಗದಿಪಡಿಸಿದ್ದು, ಪ್ರತಿ ಕ್ವಿಂಟಲ್‌ಗೆ ಕೇಂದ್ರ ಸರ್ಕಾರದಿಂದ 7550 ರೂ ಮತ್ತು ರಾಜ್ಯ ಸರ್ಕಾರದ ಸಹಾಯಧನ 450 ರೂ ಸೇರಿ ಒಟ್ಟು 8000 ರೂಗಳಿಗೆ ತೊಗರಿ ಖರೀದಿಸಿಲಾಗುವುದು” ಎಂದು ತಿಳಿಸಿದರು.

ಇದೇ ವೇಳೆ ಖರೀದಿ ಕೇಂದ್ರಕ್ಕೆ ಆರ್.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕ ವಿಜಯ್ ಕುಮಾರ್ ಪಾಟೀಲ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಶೇಖ್ ಹುಸೇನ್ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: ರಾಯಚೂರು | ವಿವಿಗಳನ್ನು ಮುಚ್ಚುವ ತೀರ್ಮಾನ ಕೂಡಲೇ ಹಿಂಪಡೆಯಲು ಸಿಪಿಐಎಂ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸಹಕಾರ ಸಂಘದ ಉಪಾಧ್ಯಕ್ಷ ಕೆ ವೆಂಕಟೇಶ್‌, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಫಾರುಖ್ ಹುಸೇನ್, ನಿರ್ದೇಶಕ ಗುಜ್ಜಾಲ್ ತಾಯಪ್ಪ ನಾಯಕ, ಕಛೇರಿ ಸಹಾಯಕ ಮಹ್ಮದ್ ಶಫಿ ಹಾಗೂ ರೈತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...