ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ ಟ್ರಾಕ್ಟರ್‌ವೊಂದು ವಿದ್ಯಾರ್ಥಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೊತ್ತದೊಡ್ಡಿ ಗ್ರಾಮದ ಮಲ್ಲೇಶ ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಟ್ರ್ಯಾಕ್ಟರ್ ಚಾಲಕ ನಾಗರಾಜ ಎಂಬಾತ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳನ್ನು ತುಂಬಿಕೊಂಡು ಇಡಪನೂರು ಮಾರ್ಗವಾಗಿ ಕೊತ್ತದೊಡ್ಡಿ ಗ್ರಾಮದ ಮೂಲಕ ಆಗಮಿಸುತ್ತಿದ್ದ ವೇಳೆ ರಸ್ತೆ ಪಕ್ಕದಲ್ಲಿ ಹೋಗುತ್ತಿದ್ದ ವಿದ್ಯಾರ್ಥಿ ಮಲ್ಲೇಶನಿಗೆ ಟ್ರಾಕ್ಟರ್ ಢಿಕ್ಕಿ ಹೊಡೆದಿದೆ. ಇದರಿಂದ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಈ ಸುದ್ದಿ ಓದಿದ್ದೀರಾ? ಹಾಸನ | ಕುಡಿತ ಬಿಡಿಸಲು ಮದ್ಯವರ್ಜನ ಕೇಂದ್ರಕ್ಕೆ ಸೇರಿದ್ದ ಯುವಕ ಸಾವು; ಕೊಲೆ ಆರೋಪ
ಮೃತ ದೇಹವನ್ನು ರಿಮ್ಸ್ ಆಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದ್ದು, ಇಡಪನೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.




