ರಾಯಚೂರು | ಜಮೀನು, ನಿವೇಶನಗಳ ವ್ಯಾಪಾರ; ಅವೈಜ್ಞಾನಿಕ ಸರ್ಕಾರಿ ಶುಲ್ಕ ಹಿಂಪಡೆಗೆ ಆಗ್ರಹ

Date:

ಜಮೀನು, ನಿವೇಶನ ಮಾರಾಟ, ಖರೀದಿಗೆ ಸರ್ಕಾರ ವಿಧಿಸಿರುವ ಶುಲ್ಕ ಅವೈಜ್ಞಾನಿಕವಾಗಿದ್ದು, ಕೂಡಲೇ ಹಿಂಪಡೆಯಬೇಕೆಂದು ಎಡೆದೊರೆ ನಾಡಿನ ಕ್ಷೇಮಾಭಿವೃದ್ದಿ ವೇದಿಕೆ ಸಂಚಾಲಕ ವಿಜಯಾನಂದ ಪಾಟೀಲ್ ಒತ್ತಾಯಿಸಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “2018-19ನೇ ಸಾಲಿನಲ್ಲಿದ್ದ ಸ್ಟಾಂಪ್ ಡ್ಯೂಟಿ ಶುಲ್ಕವನ್ನು ಶೇ.800ರಷ್ಟು ಹೆಚ್ಚಳ ಮಾಡಿರುವುದು ಅವೈಜ್ಞಾನಿಕ ಕ್ರಮವಾಗಿದೆ. ಸರ್ಕಾರದ ಕ್ರಮದಿಂದಾಗಿ ಬಡವರು, ಮಧ್ಯಮ ವರ್ಗದವರು ಸೇರಿ ಯಾರೂ ಕೂಡ ನಿವೇಶನ, ಭೂಮಿ ಖರೀದಿ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.

“ಸ್ಥಿರಾಸ್ತಿಗಳ ಪರಿಷ್ಕೃತ ದರ ನಿಗದಿ ಮಾಡುವಾಗ ಕನಿಷ್ಠ ನಿಯಮಗಳನ್ನು ಪಾಲಿಸದೇ ಇರುವುದರಿಂದಾಗಿ ಮನಸೋ ಇಚ್ಛೆ ಶುಲ್ಕ ನಿಗದಿಪಡಿಸಿದಂತಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಭೂಮಿ ಖರೀದಿ ಮಾರಾಟಕ್ಕೆ ಮುಂದಾದರೆ ಜನರು ದುಬಾರಿ ಹಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಸರ್ಕಾರ ಹೇಳಿಕೊಂಡಿರುವಂತೆ ಶುಲ್ಕ ಹೆಚ್ಚಳ ಶೇ.40ರ ಬದಲು ₹800 ಹೆಚ್ಚಳವಾಗಿದೆ. ಅಸಂಬದ್ಧವಾಗಿ ನಿಗದಿಪಡಿಸಿರುವ ದರಗಳಿಂದ ಜನರು ತತ್ತರಿಸಿ ಹೋಗುವಂತಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೋಂದಣಿ ಕಚೇರಿಗಳು ಭ್ರಷ್ಟಾಚಾರದ ಕೇಂದ್ರಗಳಾಗಿರುವಾಗ ಜನರ ಖರೀದಿ ಮತ್ತು ಮಾರಾಟವನ್ನು ಸರ್ಕಾರವೇ ಪರೋಕ್ಷವಾಗಿ ತಡೆಯುತ್ತಿದೆ. ಸರ್ಕಾರಿ ಕಚೇರಿಗಳಿಂದ ಜನರು ಕೆಲಸ ಕಾರ್ಯಗಳನ್ನು ಪಡೆಯಲಾಗುತ್ತಿಲ್ಲ. ನಗರಸಭೆ, ಜಿಲ್ಲಾಧಿಕಾರಿಗಳ ಕಚೇರಿ ಒಳಗೊಂಡಂತೆ ಬಹುತೇಕ ಸರ್ಕಾರಿ ಕಚೇರಿಗಳಿಂದ ಕಾಲಮಿತಿಯಲ್ಲಿ ಕೆಲಸವಾಗುತ್ತಿಲ್ಲ. ಸಂಕೀರ್ಣ ಪರಿಸ್ಥಿತಿಯಲ್ಲಿರುವ ಜನರಿಗೆ ಮಾರಾಟ ಶುಲ್ಕ ಹೆಚ್ಚಳ ಮಾಡಿ ಮತ್ತೊಂದು ಹೊರೆ ಜನರ ಮೇಲೆರಿದಂತಾಗಿದೆ. ಸರ್ಕಾರ ಕೂಡಲೇ ನಿಯಮಬದ್ಧವಾದ ಶುಲ್ಕ ವಿಧಿಸಲು ಮುಂದಾಗಬೇಕು. ಇಲ್ಲದೇ ಹೋದಲ್ಲಿ ನ್ಯಾಯಾಲಯದ ಮೊರೆ ಹೋಗುಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಗ್ರಾಮ ಪಂಚಾಯತಿ ಕರ್ತವ್ಯಕ್ಕೆ ಅಡ್ಡಿ ಆರೋಪ; ಸದಸ್ಯರ ವಿರುದ್ಧ ದೂರು

“ನಗರದ ಸ್ಟೇಷನ್‌ ರಸ್ತೆಯಲ್ಲಿ ಬೀದಿ ಅಂಗಡಿಗಳನ್ನು ಜಿಲ್ಲಾಧಿಕಾರಿಗಳು ತೆರವುಗೊಳಿಸಿರುವುದು ಸ್ವಾಗತಾರ್ಹ. ಆದರೆ, ಜಿಲ್ಲಾಧಿಕಾರಿಗಳ ನಿವಾಸದಿಂದ ಹಿಡಿದು ನಗರದ ವಿವಿಧಡೆ ಪಾದಾಚಾರಿ ರಸ್ತೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ನಿಗದಿತ ಸ್ಥಳ ಗುರುತಿಸಿ ಸಂಚಾರ, ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಬೇಕು. ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಜಿಲ್ಲಾಡಳಿತ ಮುಂದಾಗಬೇಕು” ಎಂದರು.

ಈ ಸಂದರ್ಭದಲ್ಲಿ ಈರಣ್ಣ ಮುದುಗಲ್, ಲಕ್ಷ್ಮೀಕಾಂತ, ಬೋಳಬಂಡಿ, ರಾಜಶೇಖರ ಸ್ವಾಮಿ ಇದ್ದರು.

ವರದಿ: ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...