ರಾಯಚೂರು | ತುಂಗಭದ್ರಾ ಎಡದಂಡೆ; ನೀರಿನ ಪ್ರಮಾಣ ಕಾಯ್ದಿರಿಸಲು ಸಚಿವ ಎನ್ ಎಸ್ ಬೋಸರಾಜು ಸೂಚನೆ

Date:

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ಮೈಲ್ 69ರಲ್ಲಿ ಇಂದು 7.5 ಅಡಿ, ಮೈಲ್ 42ರಲ್ಲಿ 11 ಅಡಿ ನೀರು ಸರಬರಾಜು ಆಗುವುದರಿಂದ ಕೆಳಭಾಗದ ಮಾನ್ವಿ, ಸಿರವಾರ, ರಾಯಚೂರಿಗೆ ಸರಿಯಾಗಿ ನೀರು ಸರಬರಾಜಾಗುತ್ತಿಲ್ಲ. ಕೂಡಲೇ ಮೈಲ್ 69ರಲ್ಲಿ 8.5ರಿಂದ 9 ಅಡಿ, ಮೈಲ್ 42ರಲ್ಲಿ 12 ಅಡಿ ನೀರಿನ ಪ್ರಮಾಣವನ್ನು ಕಾಯ್ದಿರಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್ ಎಸ್ ಬೋಸರಾಜು ಅವರು ನೀರಾವರಿ ಇಲಾಖೆಯ ಮುಖ್ಯ ಅಭಿಯಂತರರು, ಜಿಲ್ಲಾಧಿಕಾರಿ ಹಾಗೂ ಕೆಎನ್‌ಎನ್‌ಎಲ್ ಎಂಡಿ ಅವರಿಗೆ ದೂರವಾಣಿ ಮೂಲಕ ಸೂಚಿಸಿದ್ದಾರೆ.

“ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸಿ ವಾರ ಸಮೀಪಿಸಿದರೂ ಇನ್ನೂ ರಾಯಚೂರು ಜಿಲ್ಲೆಗೆ ನೀರು ತಲುಪಿಲ್ಲ. ಇದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಶೀಘ್ರ ನೀರಿನ ಪ್ರಮಾಣ ಕಾಯ್ದಿರಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಆಗಸ್ಟ್‌ 16ರಂದು ಐಸಿಸಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಯಚೂರು ಜಿಲ್ಲೆಯ ಕೆಳಭಾಗದ ರೈತರ ಜಮೀನುಗಳಿಗೆ ಅನುಗುಣವಾಗಿ ಮೈಲ್ 47, 69, 104ರಲ್ಲಿ ಸಮರ್ಪಕ ನೀರಿನ ಪ್ರಮಾಣ ಕಾಯ್ದಿರಿಸಲು ಸಭೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಐದು ಅಂಶಗಳ ಪ್ರಗತಿ; ಜಿಲ್ಲೆಗೆ ದೇಶದಲ್ಲಿಯೇ ಮೊದಲ ಸ್ಥಾನ: ಜಿಲ್ಲಾಧಿಕಾರಿ

“ಈಗಾಗಲೇ ಈ ಕುರಿತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣ್ಪಪ್ರಕಾಶ ಪಾಟೀಲ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಕೆಎನ್‌ಎನ್‌ಎಲ್ ಎಂಡಿ ಅವರೊಂದಿಗೆ ಮಾತನಾಡಿ ಕೆಳಭಾಗದ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮದ ಕುರಿತು ಚರ್ಚಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...