ರಾಯಚೂರು | ತೊಗರಿ ಬಿತ್ತನೆ ಬೀಜದಲ್ಲಿ ಯಾವುದೇ ಲೋಪವಿಲ್ಲ: ಸಚಿವ ಚಲುವರಾಯ ಸ್ವಾಮಿ

Date:

ತೊಗರಿ ಸೇರಿದಂತೆ ಇತರೆ ಬಿತ್ತನೆ ಬೀಜಗಳ ಗುಣಮಟ್ಟವನ್ನು ಮತ್ತೊಮ್ಮೆ ಪರೀಕ್ಷೆ ಮಾಡಲಾಗಿದ್ದು, ತೊಗರಿ ಬಿತ್ತನೆ ಬೀಜದಲ್ಲಿ ಯಾವುದೇ ಲೋಪವಿಲ್ಲವೆಂಬ ವರದಿ ಬಂದಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು.

ರಾಯಚೂರು ನಗರಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, “ಕೃಷಿ ಇಲಾಖೆಯಿಂದ ಪೂರೈಸಲಾಗಿರುವ ಬೀಜಗಳು ಕಳಪೆಯಾಗಿಲ್ಲ. ತೊಗರಿ ಬಿತ್ತನೆ ಮಾಡಿದ ರೈತರಿಗೆ ಅವಧಿಗೆ ಮುಂಚೆ ಇಬ್ಬನಿ ಸುರಿದಿದ್ದರಿಂದ ಇಳುವರಿ ಏರುಪೇರಾಗುತ್ತದಯೇ ಹೊರತು ಕಳಪೆ ಬೀಜವಲ್ಲ ಎಂಬುದು ಪರೀಕ್ಷೆಯಿಂದ ಗೊತ್ತಾಗಿದೆ. ವಾತಾವರಣದ ಬದಲಾವಣೆಯಿಂದ ಬಿತ್ತನೆ ಬೀಜಗಳ ಮೇಲೆ ಪ್ರಭಾವವಾಗಿದೆ, ಕಳಪೆಯಾಗಿಲ್ಲ” ಎಂದು ಸ್ಪಷ್ಟನೆ ನೀಡಿದರು.

“ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿದೆ. ಪ್ರತಿಪಕ್ಷಗಳು ಅಭಿವೃದ್ಧಿ ವಿಷಯದಲ್ಲಿ ಚರ್ಚೆಗೆ ಮುಂದಾದರೆ ಸರ್ಕಾರ ಉತ್ತರ ಕೊಡಲು ಸಿದ್ಧವಾಗಿದೆ. ಆದರೆ ಸುಳ್ಳು ಆರೋಪಗಳನ್ನು ಮಾಡಿ ಚರ್ಚೆ ನಡೆಸದೆ ಅಧಿವೇಶನ ಸಮಯ ಹಾಳಗಾದಂತೆ ಸಹಕರಿಸಬೇಕಿದೆ. ವಕ್ಫ್‌ ಪ್ರಕರಣ ಸರಿಹೋಗಿದೆ. ಮುಡಾ ಪ್ರಕರಣ ನ್ಯಾಯಾಲಯದಲ್ಲಿದೆ. ಅನಗತ್ಯವಾಗಿ ಚರ್ಚಿಸಿದರೆ ಸದನದ ಸಮಯ ಹಾಳಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಕ್ಕೆ ಅಭಿವೃದ್ಧಿ ಬೇಕಿಲ್ಲ. ಅಭಿವೃದ್ದಿಯ ಆಲೋಚನೆಯೂ ಇಲ್ಲ. ಬಸನಗೌಡ ಯತ್ನಾಳ್ ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ. ವಕ್ಫ್‌ ವಿಷಯದಲ್ಲಿ ಬಿಜೆಪಿ ಸರ್ಕಾರದವಿದ್ದಾಗಲೇ 2 ಸಾವಿರ ನೋಟಿಸ್ ನೀಡಲಾಗಿದೆ” ಎಂದರು.

“ಮಂಡ್ಯದಲ್ಲಿ ಜೆಡಿಎಸ್ ಸಮಾವೇಶ ನಡೆಸಿದರೆ ನಡೆಸಲಿ. ರಾಜಕೀಯ ಪಕ್ಷವಾಗಿ ಸಮಾವೇಶ ನಡೆಸಲು ಸ್ವತಂತ್ರರು. ನಾವೇಕೆ ವಿರೋಧಿಸಬೇಕು. ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಶಕ್ತಿಯೇನು ಎಂಬುದನ್ನು ಜನರು ತಿಳಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಬಾಣಂತಿಯರ ಸಾವಿಗೆ ₹5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

“ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ, ಸಿಎಂ ಬದಲಾವಣೆ ಮಾಡಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅದರೆ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಹೇಳಿದರೆ ಮುಖ್ಯಮಂತ್ರಿ ಬದಲಾಗುವುದಿಲ್ಲ” ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಪಾಟಿಲ್ ಇಟಗಿ, ಮಹ್ಮದ್ ಶಾಲಂ, ಯೂಸೂಫ್ ಖಾನ್ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...