ರಾಯಚೂರು | ಅಸಮತೋಲನಾ ಆಸ್ತಿ ಪ್ರಕರಣ; ಸಹಾಯಕ ಲೆಕ್ಕಾಧಿಕಾರಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ದಲಿತ ಸೇನೆ ಆಗ್ರಹ

Date:

ಜಿಲ್ಲಾ ಪಂಚಾಯತ್ ಲೆಕ್ಕಶಾಖೆಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಗ್ ರಾವ್ ಗುಜ್ಜರ್ ಅವರ ವಿರುದ್ಧ ಮಾನ್ಯ ಲೋಕಾಯುಕ್ತರು ನಡೆಸಿದ ದಾಳಿಯಲ್ಲಿ ಅಸಮತೋಲನಾ ಆಸ್ತಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸಿ ಮಾತೃ ಇಲಾಖೆಗೆ ಹಿಂದಿರುಗಿಸಬೇಕು ಎಂದು ದಲಿತ ಸೇನೆ ಜಿಲ್ಲಾ ಸಮಿತಿ ರಾಯಚೂರು ವತಿಯಿಂದ ಒತ್ತಾಯಿಸಿದರು.

ನರಸಿಂಗ್ ರಾವ್ ಗುಜ್ಜರ್ ಅವರ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ ಸಂದರ್ಭದಲ್ಲಿ ಅವರ ಆದಾಯಕ್ಕಿಂತ ಶೇ.89.41ರಷ್ಟು ಅಕ್ರಮ ಸಂಪಾದನೆಯ ಅಸಮತೋಲನಾ ಆಸ್ತಿ ಪತ್ತೆಯಾಗಿದ್ದು, ಸುಮಾರು 55 ಲಕ್ಷ ರೂ.ಗಳ ಚರ–ಸ್ಥಾವರ ಆಸ್ತಿಯನ್ನು ಕಾನೂನುಬಾಹಿರವಾಗಿ ಸಂಪಾದಿಸಿರುವುದು ಬೆಳಕಿಗೆ ಬಂದಿದೆ ಎಂದು ದಲಿತ ಸೇನೆ ಜಿಲ್ಲಾಧ್ಯಕ್ಷ ಮಾರುತಿ ಚಿಕ್ಕಸೂಗೂರು ತಿಳಿಸಿದರು.

ಇಂತಹ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಅವರು ಮುಂದುವರೆದು ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದರೆ, ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗುವುದರ ಜೊತೆಗೆ, ಪ್ರಭಾವಿ ಹುದ್ದೆಯಲ್ಲಿರುವ ಕಾರಣದಿಂದ ಸಾಕ್ಷ್ಯಗಳನ್ನು ತಿರುಚುವ ಹಾಗೂ ಲೋಕಾಯುಕ್ತ ತನಿಖೆಗೆ ಅಡ್ಡಿಯಾಗುವ ಸಾಧ್ಯತೆಗಳಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಒಒಡಿ ರದ್ದುಪಡಿಸಿ ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸಿ, ಸದರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಬೇರೆ ಅಧಿಕಾರಿಗೆ ವಹಿಸುವುದು ಸೂಕ್ತ ಎಂದು ಮನವಿ ಮೂಲಕ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಂಪಿಸಿಎಲ್- ಕೃಷ್ಣಬ್ರಿಡ್ಜ್ ರಸ್ತೆಯಲ್ಲಿ ನಿಲ್ಲದ ರಸ್ತೆ ಅಪಘಾತ

ಈ ಸಂದರ್ಭದಲ್ಲಿ ಸುರೇಶ್ ಬಾಬು, ಜೆ.ಮಧುಕಾಂತ್, ಕೃಷ್ಣ ಮಾರ್ಷಲ್ ಸೇರಿದಂತೆ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...