ರಾಯಚೂರು | ಕೇಂದ್ರ ಬಜೆಟ್ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

Date:

ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಹಾಗೂ ಯುವಜನ ವಿರೋಧಿಯಾಗಿರುವ ಕೇಂದ್ರ ಬಜೆಟ್ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿತು.

ರಾಯಚೂರು ನಗರದ ಅಂಬೇಡ್ಕರ್‌ ವೃತ್ತದಲ್ಲಿ ಬಜೆಟ್ ಪ್ರತಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸಿತಾರಾಮ್ ಪ್ರತಿಕೃತಿ ದಹಿಸಿ ಸಂಘಟನೆ ಮುಖಂಡರು ಆಕ್ರೋಶ ಹೊರಹಾಕಿದರು.

“ಮಂಡನೆಯಾಗಿರುವ ಬಜೆಟ್‌ನ್ನು ಬದಲಾವಣೆ ಮಾಡಬೇಕು. ಬೆಲೆ ಏರಿಕೆ, ನಿರುದ್ಯೋಗ, ಬಡತನ, ಹಸಿವು, ವಲಸೆ ಮುಂತಾದ ಆರ್ಥಿಕ ಸಮಸ್ಯೆಗಳನ್ನು ನಿವಾರಿಸುವ ಗುರಿಯುಳ್ಳ ಬಜೆಟ್ ಆಗಿ ಮರು ರೂಪಿಸಬೇಕು. ಉದ್ಯೋಗ ಸೃಷ್ಟಿಗೆ ಸಂಪೂರ್ಣ ಒತ್ತು ನೀಡಬೇಕು. ಖಾಸಗೀಕರಣ ನೀತಿಗಳನ್ನು ಸಂಪೂರ್ಣವಾಗಿ ಕೈ ಬಿಡಬೇಕು. ಆರೋಗ್ಯ, ಶಿಕ್ಷಣ, ಆಹಾರ ಭದ್ರತೆ, ಗ್ರಾಮೀಣ ಉದ್ಯೋಗ ಖಾತರಿ ಮಾನವ ಅಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆಗೆ ಆಗಿರುವ ಅನುದಾನ ಕೊರತೆ ಹಾಗೂ ನಿರ್ಲಕ್ಷ್ಯವನ್ನು ಸರಿಪಡಿಸಬೇಕು ಎಂದು” ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತೆರಿಗೆ ಹಂಚಿಕೆಯಲ್ಲಿ ಕರ್ನಾಟಕ ಹಾಗೂ ದಕ್ಷಿಣದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಹಾಗೂ ತಾರತಮ್ಯವನ್ನು ಸರಿಪಡಿಸಬೇಕು. ಐತಿಹಾಸಿಕ ದೆಹಲಿ ರೈತ ಹೋರಾಟದ ಮೂಲಕ ಹಿಮ್ಮೆಟ್ಟಿಸಿದ ಕರಾಳ ಕೃಷಿ ಕಾಯ್ದೆಗಳನ್ನು, ವಿದ್ಯುತ್ ಖಾಸಗೀಕರಣ ನೀತಿಗಳನ್ನು ಕರಾಳ ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ಮೂಲಕ ಹಾಗೂ ವಿದ್ಯುತ್ ವಲಯ ವನ್ನು ಖಾಸಗಿ ಕಾರ್ಪೊರೇಟ್ ದೈತ್ಯರಿಗೆ ವಹಿಸುವ ಮೂಲಕ ಜಾರಿಗೆ ತರುವ ಎಲ್ಲಾ ಪ್ರಯತ್ನಗಳನ್ನು ಕೂಡಲೇ ನಿಲ್ಲಿಸಬೇಕು. ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿ ಕಾನೂನು ರೂಪಿಸಬೇಕು ಎಂಬುದು ಸೇರಿದಂತೆ ಎಲ್ಲಾ ದುಡಿಯುವ ಜನತೆಯನ್ನು ಸಾಲ ಬಾಧೆಯಿಂದ ಮುಕ್ತಿಗೊಳಿಸಬೇಕು. ಎಲ್ಲಾ ದುಡಿಯುವ ಜನರಿಗೆ ಘನತೆ ಹಾಗೂ ಗೌರವದಿಂದ ಜೀವಿಸುವ ರೀತಿಯಲ್ಲಿ ಕನಿಷ್ಟ ವೇತನ ಮತ್ತು ಪಿಂಚಣಿ ಭದ್ರತೆ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಸಾರಿಗೆ ಬಸ್ ಪಲ್ಟಿ; ಹಲವರಿಗೆ ಗಾಯ

ಈ ವೇಳೆ ವಿವಿಧ ಸಂಘಟನೆಗಳ ಮುಖಂಡರುಗಳಾದ ಚಾಮರಸ ಮಾಲಿ ಪಾಟೀಲ್, ಕೆ ಜಿ ವೀರೇಶ, ಹೆಚ್ ಪದ್ಮಾ, ಡಿ ಎಸ್ ಶರಣ ಬಸವ, ಜಿಂದಪ್ಪ ವಡ್ಲೂರು, ಕೆ ರಂಗನಾಥ ಡಿ.ರಾಂಪೂರ, ಮುದುಕಪ್ಪ, ಖಾಜಾ ಅಸ್ಲಂ ಅಹ್ಮದ್ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...