ರಾಯಚೂರು | ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಬಳಕೆ; ಪ್ರಗತಿಪರ ಚಿಂತಕರ ಅಸಮಾಧಾನ

Date:

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಹಿಂದೂಪರ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದು‌ ಖಂಡನೀಯ ಎಂದು ಪ್ರಗತಿಪರ ಚಿಂತಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

“ಬಾಂಗ್ಲಾ ದೇಶದಲ್ಲಿ ಇಸ್ಕಾನ್ ದೇವಾಲಯ, ಹಿಂದೂ ಧರ್ಮಗುರು ಚಿನ್ಮಯಕೃಷ್ಣ ದಾಸ್ ಸ್ವಾಮೀಜಿಯನ್ನು ಬಂಧಿಸಿದ್ದನ್ನು ವಿರೋಧಿಸಿ ಕೈಗೊಂಡ ಪ್ರತಿಭಟನೆಯಲ್ಲಿ‌ ವಿವಿಧ ಸ್ವಾಮೀಜಿಗಳು, ಹಿಂದೂಪರ ಸಂಘಟನೆಗಳ ಮುಖಂಡರು, ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಆದರೆ ಡಾ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಕೆಲ ಕಾಲ ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದ್ದಲ್ಲದೇ ವಿದ್ಯಾರ್ಥಿನಿಯರನ್ನು ಸುಡು ಬಿಸಿಲಿನಲ್ಲಿ ಕೂರಿಸಿ ರಾಜಕೀಯವಾಗಿ, ಹಿಂದೂಗಳ ಪರವಾಗಿ ಬಳಸಿಕೊಂಡು ಅಮಾಯಕತನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ” ಎಂದು ಪ್ರಗತಿಪರ ಸಂಘಟನೆಗಳ‌ ಮುಖಂಡರು ಆಕ್ರೋಶ ಹೊರಹಾಕಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ನಿರಾಶ್ರಿತ ಮಹಿಳೆ ರಾಬಿಯಾಗೆ ಒಂದೇ ದಿನದಲ್ಲಿ ನಿವೇಶನ ನೀಡಲು ಜಿಲ್ಲಾಡಳಿತದಿಂದ ಠರಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ಥಳೀಯ ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸರು ಸ್ಥಳದಲ್ಲಿದ್ಧರೂ ಮೂಕಪ್ರೇಕ್ಷಕರಾಗಿದ್ದರು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದಕ್ಕೆ ಭಾರತೀಯ ಕ್ರಾಂತಿಕಾರಿ ಯುವಜನ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ದಲಿತಪರ ಸಂಘಟನೆಗಳು, ಅಜೀಜ ಜಾಗೀರದಾರ್, ರವಿಚಂದ್ರ ಪರಶುರಾಮ ಅರೋಲಿ ಈ ನಡೆಯನ್ನು ಖಂಡಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...