ರಾಯಚೂರು | ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹ; ಗಬ್ಬೆದ್ದ ನೀರಿನಿಂದ ಹೆಚ್ಚಿದ ಸೊಳ್ಳೆ ಕಾಟ

Date:

ಸಿಂಧನೂರು ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹವಾಗಿದ್ದು, ದುರ್ವಾಸನೆ ಬೀರುತ್ತಿದೆ. ಇದರಿಂದ ಪ್ರಯಾಣಿಕರಿಗೆ ಕೂರಲು ಜಾಗವಿಲ್ಲದೆ ಪರದಾಡುವಂತಾಗಿದೆ.

“ಕೊಳಚೆ ನೀರು ಸಂಗ್ರಹವಾಗಿರುವುದರಿಂದ ಸೊಳ್ಳೆಗಳ ಹಾವಳಿಯೂ ವಿಪರೀತವಾಗಿದೆ. ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ. ಹಾಗಾಗಿ ಕೂಡಲೇ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆ ನಿವಾರಿಸಬೇಕು” ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಬಸ್‌ ನಿಲ್ದಾಣದ ಅಂಗಡಿ ಮಾಲೀಕರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಬಸ್ ನಿಲ್ದಾಣದಲ್ಲಿದ್ದ ಅಂಗಡಿಗಳಲ್ಲಿ ಮುಂಜಾನೆಯಿಂದ ಸಂಜೆವರೆಗೂ ಈ ದುರ್ವಾಸನೆಯಲ್ಲಿಯೇ ಕೂರುವಂತಾಗಿದೆ. ಅಂಗಡಿ ಬಂದ್‌ ಮಾಡಿದರೆ ವ್ಯಾಪಾರ ವಹಿವಾಟಿಗೆ ಪೆಟ್ಟು ಬೀಳುತ್ತದೆ. ಹೀಗಾಗಿ ಅನಿವಾರ್ಯವಾಗಿ ಈ ದುರ್ವಾಸನೆಯಲ್ಲಿಯೇ ಕುಳಿತುಕೊಳ್ಳುವಂತಹ ಪರಿಸ್ಥಿತಿ ಬಂದೊದಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬಸ್‌ ನಿಲ್ದಾಣ

“ಪ್ರಯಾಣಿಕರು ಈ ಕೊಳಚೆ ನೀರಿನಲ್ಲಿಯೇ ನಡೆದುಕೊಂಡು ಹೋಗಿ ಬಸ್‌ ಹತ್ತುವುದು ಮತ್ತು ಇಳಿಯುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ಸ್ವಲ್ಪ ಮೈ ಮರೆತರೆ ಸಾಕು ಕೊಳಚೆ ನೀರಿನೊಳಗೆ ಬೀಳುವುದರಲ್ಲಿ ಅಚ್ಚರಿಯೇ ಇಲ್ಲ” ಎಂದು ಹೇಳಿದರು.

ಸ್ಥಳೀಯ ನಿವಾಸಿ, ಹೋರಾಟಗಾರ ಬಸವರಾಜ್ ಬಾದರ್ಲಿ ಮಾತನಾಡಿ, “ಕಳೆದ ಮೂರ್ನಾಲ್ಕು ದಿನಗಳಿಂದ ಕೊಳಚೆ ನೀರು ತುಂಬಿಕೊಂಡಿದೆ. ಆದರೂ ಕೂಡ ಸಂಬಂಧಪಟ್ಟ ಅಧಿಕಾರಿಗಳು ಇದಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವೇ ಇಲ್ಲ ಎನ್ನುವಂತೆ ಜಾಣಕುರುಡು ಪ್ರದರ್ಶಿಸಿದ್ದಾರೆ” ಎಂದು ಆರೋಪಿಸಿದರು.

“ಪ್ರಯಾಣಿಕರು ಹಾಗೂ ವ್ಯಾಪಾರಿಗಳ ನೋವು ಕೇಳುವವರೇ ಇಲ್ಲದಂತಾಗಿದೆ. ಹಲವು ಬಾರಿ ಬಸ್ ನಿಲ್ದಾಣದ ಬಗ್ಗೆ ಮನವಿ ನೀಡಿ, ಹೋರಾಟ ಮಾಡಿದರೂ ಕೂಡಾ ಯಾವುದೇ ರೀತಿಯ ಬದಲಾವಣೆ ಕ್ರಮ ಕೈಗೊಳ್ಳುತ್ತಿಲ್ಲ. ಯಥಾಸ್ಥಿತಿ ಬಸ್ ನಿಲ್ದಾಣ ಹದಗೆಡುತ್ತಿದೆ. ಸಿಂಧನೂರು ಬಸ್ ನಿಲ್ದಾಣದಲ್ಲಿ ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು, ಶಾಲಾ ವಿದ್ಯಾರ್ಥಿಗಳು ಬಸ್ ನಿಲ್ದಾಣಕ್ಕೆ ಬರದೇ ರಸ್ತೆಯಲ್ಲೇ ನಿಂತು ಬಸ್ ಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ‌ಗೆ ಆಗ್ರಹ

“ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ಬಸ್‌ ನಿಲ್ದಾಣದ ಸ್ವಚ್ಛತೆ ಕಾಪಾಡಬೇಕು. ನಗರದಲ್ಲಿ ಸಾಂಕ್ರಾಮಿಕ ರೋಗಗಳು ಹರಡಿದರೆ ನಗರಸಭೆ ಇಲಾಖೆಯೇ ನೇರ ಕಾರಣವಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...