ರಾಯಚೂರು | ಖಾಸಗಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುತ್ತಿರುವಾಗ ಮೀಸಲಾತಿಯ ಭವಿಷ್ಯವೇನು?: ಬರಗೂರು ರಾಮಚಂದ್ರಪ್ಪ

Date:

21ನೇ ಶತಮಾನದಲ್ಲಿ ದೇಶವು ವ್ಯಾಪಕ ಖಾಸಗೀಕರಣದ ಹಾದಿಯಲ್ಲಿ ಸಾಗುತ್ತಿದೆ. ಸಾರ್ವಜನಿಕ ವಲಯದ ಅನೇಕ ಉದ್ಯಮಗಳನ್ನು ಕೋಟ್ಯಾಧಿಪತಿಗಳಿಗೆ ಮಾರಾಟ ಮಾಡುತ್ತಿರುವ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಇಂತಹ ಸಂದರ್ಭದಲ್ಲಿ ಖಾಸಗಿ ವಲಯಕ್ಕೆ ಹೆಚ್ಚುವರಿ ಆದ್ಯತೆ ನೀಡಲಾಗುತ್ತಿದ್ದು, ಇದರ ಪರಿಣಾಮವಾಗಿ ಮೀಸಲಾತಿಯ ಭವಿಷ್ಯವೇನು? ಎಂಬ ಕುರಿತು ಗಂಭೀರ ಚರ್ಚೆಯ ಅಗತ್ಯವಾಗಿದೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಕಿವಿಮಾತು ಹೇಳಿದರು.

ರಾಯಚೂರು ನಗರದಲ್ಲಿ ನಡೆದ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತಾನಾಡಿದ ಅವರು, “ಖಾಸಗೀಕರಣ ಪ್ರಬಲವಾಗುತ್ತ ಹೋದರೆ, ಖಾಸಗೀಕರಣವೇ ಈ ದೇಶದ ಜೀವನ ವಿಧಾನವಾಗಿಬಿಟ್ಟರೆ, ಅಲ್ಲಿ ಮೀಸಲಾತಿಗೆ ಎಷ್ಟರ ಮಟ್ಟಿಗೆ ಅವಕಾಶ ಉಳಿಯುತ್ತದೆ ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ಖಾಸಗೀಕರಣವು ಸ್ವಾರ್ಥಪರವಾಗಿದ್ದು, ಲಾಭಕೇಂದ್ರಿತವಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯ, ಸಮಾನ ಅವಕಾಶಗಳು ಹಾಗೂ ಸಂವಿಧಾನಾತ್ಮಕ ಮೌಲ್ಯಗಳು ಹೇಗೆ ಉಳಿಯಲಿವೆ ಎಂಬ ಪ್ರಶ್ನೆಗಳನ್ನು ನಾವು ಎದುರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಸಮಾಜದಲ್ಲಿ ನಿಜವಾದ ಬದಲಾವಣೆ ಆಗಬೇಕಾದರೆ ಜಾತಿ ವಿನಾಶವಾಗಬೇಕೆಂದು ನಾವು ಸದಾ ಹೇಳುತ್ತ ಬಂದಿದ್ದೇವೆ. ಆದರೆ ವಾಸ್ತವದಲ್ಲಿ ಜಾತಿ ವಿನಾಶವಾಗುವ ಬದಲು ಜಾತಿಯೇ ಮತ್ತಷ್ಟು ವಿಕಾಸವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾರ್ಮಿಕ ವಿರೋಧಿ ಶ್ರಮನೀತಿ-25 ರದ್ದಾಗಲಿ: ಕಾರ್ಮಿಕರ ಹಕ್ಕುಗಳ ದಿನವಾಗಿ ಶ್ರಮಿಕ ಶಕ್ತಿ ಪ್ರತಿಭಟನೆ

“ಒಂದು ಕಾಲದಲ್ಲಿ ಶಿಕ್ಷಣ ಬಂದರೆ ಜಾತಿ ವ್ಯವಸ್ಥೆ ತಾನಾಗಿಯೇ ಕುಸಿಯುತ್ತದೆಂದು ನಾವು ನಂಬಿದ್ದೆವು. ಆದರೆ ಇಂದಿನ ಸ್ಥಿತಿಯಲ್ಲಿ ಹೆಚ್ಚು ಶಿಕ್ಷಣ ಪಡೆದವರೇ ಜಾತಿ ವಿಚಾರವನ್ನು ಹೆಚ್ಚು ಪ್ರಸ್ತಾಪಿಸುತ್ತಿರುವುದು ವಿಪರ್ಯಾಸವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...