ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಪತಿಯೇ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ನಡೆದಿದೆ.
ಶಿಲ್ಪಾ(27) ಪತಿಯಿಂದ ಹತ್ಯೆಗೊಳಗಾದ ದುರ್ದೈವಿ. ಶಿಲ್ಪಾಳ ಪತಿ ಸಿದ್ದು ಎಂಬಾತ ಆಕೆಯ ನಡೆತೆ ಶಂಕಿಸಿ ಮಂಗಳವಾರ ರಾತ್ರಿ ಗಲಾಟೆ ಮಾಡಿದ್ದಾನೆ. ಬಳಿಕ ಆಕೆಗೆ ಮಾರಕಾಸ್ತ್ರದಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿದ ಶಿಲ್ಪಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮೆಯನ್ನು ಕೊಂದ ಪ್ರಿಯಕರ
ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸಿದ್ದುನನ್ನು ಪೊಲೀಸರು ಬಂಧಿಸಿದ್ದಾರೆ.




