ರಾಯಚೂರು | ಸಾರ್ವಜನಿಕ ಶೌಚಾಲಯವಿಲ್ಲದೆ ಹೈರಾಣು; ಕಚೇರಿ ಕೆಲಸಕ್ಕೆ ಬರುವವರ ಆಕ್ರೋಶ

Date:

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ, ಮೂತ್ರಾಲಯ ಕೊರತೆಯಿಂದ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಂದ ವಿವಿಧ ಕೆಲಸ ಕಾರ್ಯಗಳಿಗಾಗಿ ಪಟ್ಟಣಕ್ಕೆ ಬರುವ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

ಅಂದಾಜು 25 ರಿಂದ 30 ಸಾವಿರ ಜನ ಸಂಖ್ಯೆಯನ್ನು ಹೊಂದಿದ ಪಟ್ಟಣದ ವ್ಯಾಪ್ತಿಗೆ 52 ಹಳ್ಳಿಗಳು ಮತ್ತು19 ಕ್ಯಾಂಪ್‌ಗಳು ಸೇರಿರುತ್ತವೆ. ಪಟ್ಟಣ ಪಂಚಾಯಿತಿ, ಸಮುದಾಯ ಆರೋಗ್ಯ ಕೇಂದ್ರ, ನೆಮ್ಮದಿ ಕೇಂದ್ರ, ಪೊಲೀಸ್ ಠಾಣೆ, ಶಾಲಾ ಕಾಲೇಜುಗಳು, ರೈತ ಸಂಪರ್ಕ ಕೇಂದ್ರ, ವಸತಿ ಶಾಲೆಗಳು ಸೇರಿದಂತೆ ಹಲವು ಪ್ರಮುಖ ಸರ್ಕಾರಿ ಕಚೇರಿಗಳಿವೆ.

ಸರ್ಕಾರಿ ಕಚೇರಿಗಳಿಗೆ ಹಾಗೂ ಮಾರುಕಟ್ಟೆಗೆ ಖರೀದಿಗಾಗಿ ಹಳ್ಳಿ ಮತ್ತು ಕ್ಯಾಂಪ್‌ಗಳಿಂದ ಬರುವ ಜನರು ಮೂತ್ರಾಲಯ ಸಮಸ್ಯೆಯಿಂದ ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಳೇ ಬಸ್ ನಿಲ್ದಾಣದ ಹತ್ತಿರವಿದ್ದ ಒಂದು ಶೌಚಾಲಯವನ್ನು ರಸ್ತೆ ನಿರ್ಮಾಣ ಸಂದರ್ಭದಲ್ಲಿ ತೆರವುಗೊಳಿಸಲಾಗಿದೆ. ಹೀಗಾಗಿ ಮೂತ್ರ ವಿಸರ್ಜನೆಗೆ 1 ಕಿ ಮೀ ದೂರದ ಪೆಟ್ರೋಲ್ ಬಂಕ್ ಮತ್ತು ಹೊಸ ಬಸ್ ನಿಲ್ದಾಣದ ಹತ್ತಿರ ಬಯಲು ಜಾಗ ಹುಡುಕಿಕೊಂಡು ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ” ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

“ಬೈಕ್ ಸವಾರರು ಮತ್ತು ವಾಹನಗಳಲ್ಲಿ ತೆರಳುವವರು ಊರಿಂದ ಆಚೆಗೆ ವಾಹನ ನಿಲ್ಲಿಸಿ ನಿಸರ್ಗದ ಕರೆಗೆ ಓಗೊಡುತ್ತಾರೆ. ಪುರುಷರು ಎಲ್ಲೆಂದರಲ್ಲಿ ಚರಂಡಿ ಹತ್ತಿರ ಅಥವಾ ಗೋಡೆ ಮರೆಯಲ್ಲಿ ನಿಂತು ಮೂತ್ರ ಮಾಡುತ್ತಾರೆ. ಆದರೆ, ಹಳ್ಳಿಗಳಿಂದ ಬರುವ ಮಹಿಳೆಯರು, ಮಕ್ಕಳು, ರೋಗಿಗಳು ಮೂತ್ರ ವಿಸರ್ಜನೆಗೆ ಬಯಲು ಜಾಗ ಹುಡುಕಿಕೊಂಡು ಓಣಿಯ ಸಂಧಿಗೊಂದಿಗಳಲ್ಲಿ ಹೋಗುವಂತಾಗಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಈಶ್ವರಪ್ಪ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡುವಂತೆ ಆಗ್ರಹ

“ಹಲವು ಸಂಘ ಸಂಸ್ಥೆಗಳು ಮತ್ತು ಸ್ಥಳೀಯ ಮುಖಂಡರು ಶೌಚಾಲಯ ನಿರ್ಮಾಣ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸ್ಥಳೀಯ ಆಡಳಿತ ಹಾಗೂ ಜನ ಪ್ರತಿನಿಧಿಗಳು ಈವರೆಗೂ ಸ್ಪಂದಿಸಿಲ್ಲ” ಎಂದು ಆರೋಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...