ರಾಯಚೂರು | ಮನೆ ಗೋಡೆ ಕುಸಿದು ಮಹಿಳೆ ಸಾವು ಓರ್ವ ಗಾಯ

Date:

ನಿನ್ನೆ ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಸ್ಥಳದಲ್ಲಿ ಮಹಿಳೆ ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ಘಟನೆ ಮಾನ್ವಿ ತಾಲ್ಲೂಕು ಕಾತರಕಿ ಗ್ರಾಮದಲ್ಲಿ ನಡೆದಿದೆ.

ಕಾತರಕಿ ಗ್ರಾಮದ ನಿವಾಸಿ, ತಾಯಮ್ಮ ಗಂಡ ಬೆಂಕಿ ರಮೇಶ್ (35) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಊಟ ಮಾಡಿ ರಾತ್ರಿ ಮಲಗಿದ್ದಾಗ ಬಿರುಸಿನ ಗಾಳಿ ಹಾಗೂ ಧಾರಾಕಾರ ಮಳೆ ಸುರಿದಿದೆ. ಮನೆಯ ಗೋಡೆ ನೆನೆದಿದ್ದರಿಂದ ಗೋಡೆ ಕುಸಿಯಿತು.ಗೋಡೆಗೆ ಹೊಂದಿಕೊಂಡೇ ಮಲಗಿದ್ದ ಕಾರಣ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಹಾಗೂ ಮಗಳಿಗೂ ಕಾಲು ಮುರಿದಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ಮಗಳಿಗೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಶಾಸಕ ಹಂಪಯ್ಯ ಸಾಹುಕಾರ ಹಾಗೂ ತಹಶೀಲ್ದಾರ ಭೀಮರಾಯ ರಾಮಸಮುದ್ರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಮೃತಳಿಗೆ ಪತಿ, ಓರ್ವ ಪುತ್ರಿ ಇದ್ದಾರೆ. ಮಾನ್ವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...